Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...