Homeಮುಖಪುಟ“ದೇಶದ್ರೋಹ” ಕಾನೂನನ್ನು ರದ್ದು ಮಾಡಿ, ಹೊಸ ಕಾನೂನಿನಡಿ 7 ವರ್ಷ ಜೈಲು-ಅಮಿತ್ ಶಾ

“ದೇಶದ್ರೋಹ” ಕಾನೂನನ್ನು ರದ್ದು ಮಾಡಿ, ಹೊಸ ಕಾನೂನಿನಡಿ 7 ವರ್ಷ ಜೈಲು-ಅಮಿತ್ ಶಾ

- Advertisement -
- Advertisement -

“ದೇಶದ್ರೋಹ” ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಸಂಸತ್ತಿನಲ್ಲಿ ಹೇಳಿದ್ದು, ಕ್ರಿಮಿನಲ್  ಕಾನೂನುಗಳಿಗೆ ತಿದ್ದುಪಡಿ ತರುವ ಉದ್ದೇಶದಿಂದ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ.

“ದೇಶದ್ರೋಹ” ಕಾನೂನನ್ನು ರದ್ದುಪಡಿಸಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕಾರ್ಯಗಳಿಗಾಗಿ ಸೆಕ್ಷನ್ 150ರಲ್ಲಿ ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರಸ್ತುತ, ದೇಶದ್ರೋಹಕ್ಕೆ ಮೂರು ವರ್ಷಗಳಿಂದ ಜೀವಾವಧಿವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಹೊಸ ನಿಬಂಧನೆಯು ಮೂರು ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಲಿದೆ ಎಂದು ಹೇಳಲಾಗಿದೆ.

ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕಿದೆ. ನಾವು ದೇಶದ್ರೋಹವನ್ನು ಸಂಪೂರ್ಣವಾಗಿ ರದ್ದುಗೊಳಿಸುತ್ತಿದ್ದೇವೆ ಎಂದು ಗೃಹ ಸಚಿವರು ಸಂಸತ್ತಿನಲ್ಲಿ ಮಸೂದೆಗಳನ್ನು ಮಂಡಿಸುವಾಗ ಹೇಳಿದ್ದಾರೆ.

ಹೊಸ ಮಸೂದೆಯಲ್ಲಿ ‘ದೇಶದ್ರೋಹ’ ಎಂಬ ಪದವನ್ನು ತೆಗೆದುಹಾಕಲಾಗಿದೆ ಮತ್ತು ಕೆಲವು ಬದಲಾವಣೆಗಳೊಂದಿಗೆ ಸೆಕ್ಷನ್ 150 ರ ಅಡಿಯಲ್ಲಿ ನಿಬಂಧನೆಯನ್ನು ಉಳಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಉದ್ದೇಶಪೂರ್ವಕವಾಗಿ, ಪದಗಳಿಂದ, ಮಾತನಾಡುವ ಅಥವಾ ಬರೆಯುವ ಮೂಲಕ, ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದಿಂದ ಪ್ರಚೋದಿಸುವ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು,  ಪ್ರತ್ಯೇಕತಾವಾದಿ ಚಟುವಟಿಕೆ ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಮತ್ತು ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಸಹ ಹೊಣೆಗಾರನಾಗಬಹುದು ಹೊಸ ನಿಬಂಧನೆಯು ಹೇಳುತ್ತದೆ.

ಇದನ್ನು ಓದಿ: ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ನೀಡಲಾಗುವುದು- ಅಮಿತ್ ಶಾ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...