Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...