Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...