Homeಮುಖಪುಟಚುನಾವಣೆ ಸೋಲಿನಿಂದ ಮೋದಿ ಸರಕಾರ ಏನನ್ನೂ ಕಲಿತಿಲ್ಲದಂತೆ ತೋರುತ್ತದೆ: ಪ್ರಶಾಂತ್ ಭೂಷಣ್

ಚುನಾವಣೆ ಸೋಲಿನಿಂದ ಮೋದಿ ಸರಕಾರ ಏನನ್ನೂ ಕಲಿತಿಲ್ಲದಂತೆ ತೋರುತ್ತದೆ: ಪ್ರಶಾಂತ್ ಭೂಷಣ್

- Advertisement -
- Advertisement -

2024ರ ಲೋಕಸಭೆ ಚುನಾವಣೆಯ ಸೋಲಿನಿಂದ ಮೋದಿ ಸರಕಾರ ಏನನ್ನೂ ಕಲಿತಿಲ್ಲದಂತೆ ತೋರುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮೋದಿ ನೇತೃತ್ವದ ನೂತನ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಸೆಕ್ಷನ್ 13ರಡಿಯಲ್ಲಿ ಲೇಖಕಿ ಅರುಂಧತಿ ರಾಯ್ ಹಾಗೂ ಕಾಶ್ಮೀರ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಕಾನೂನು ಪ್ರಾಧ್ಯಾಪಕರಾಗಿದ್ದ ಡಾ. ಶೇಖ್ ಶೌಕತ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಶುಕ್ರವಾರ ಅನುಮತಿ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರಶಾಂತ್ ಭೂಷಣ್, 2024ರ ಸೋಲಿನಿಂದ ಮೋದಿ ಸರ್ಕಾರ ಏನನ್ನೂ ಕಲಿತಿಲ್ಲ ಎಂದು ತೋರುತ್ತದೆ. ಭಾರತವನ್ನು ಸರ್ವಾಧಿಕಾರ ಮತ್ತು ಬನಾನಾ ರಿಪಬ್ಲಿಕ್ ಮಾಡಲು ಮತ್ತಷ್ಟು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

2010ರಲ್ಲಿ  ‘ಆಝಾದಿ – ದಿ ಓನ್ಲಿ ವೇ’ ತಲೆಬರಹದಲ್ಲಿ ಕಮಿಟಿ ಫಾರ್ ದಿ ರಿಲೀಸ್ ಆಫ್ ಪೊಲಿಟಿಕಲ್ ಪ್ರಿಸನರ್ಸ್ ಸಂಘಟನೆಯು ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಗಿದೆ ಎಂದು ಹಲವಾರು ಮಂದಿಯ ವಿರುದ್ಧ ಸುಶೀಲ್ ಪಂಡಿತ್ ದೂರು ದಾಖಲಿಸಿದ್ದರು.

ಕಳೆದ ವರ್ಷ ಲೇಖಕಿ ಅರುಂಧತಿ ರಾಯ್ ಮತ್ತು ಡಾ. ಶೇಖ್ ಶೌಕತ್ ವಿರುದ್ಧ ಇದೇ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ/153ಬಿ ಹಾಗೂ 505ರ ಅಡಿ ವಿಚಾರಣೆಗೊಳಪಡಿಸಲು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 196ರ ಅಡಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ನೀಡಿದ್ದರು.

ಇದನ್ನು ಓದಿ: ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...