Homeಮುಖಪುಟಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

ಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

- Advertisement -
- Advertisement -

ಪ.ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್‌ ನಾಯಕ ಅಧೀರ್ ಚೌಧರಿ ನಡುವೆ ನಡೆಯುತ್ತಿದ್ದ ಜಟಾಪಟಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ  ಮತ್ತಷ್ಟು ತಾರಕಕ್ಕೇರಿದೆ. ಯೂಸುಫ್ ಪಠಾಣ್ ಅವರಿಗೆ ಬಹರಂಪುರ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ ನೀಡಿದೆ. ಬಹರಂಪುರ ಕ್ಷೇತ್ರ 5 ಅವಧಿಗಳ ಕಾಲ ಅಧೀರ್‌ ಚೌಧರಿ ಅವರು ಕಾಂಗ್ರೆಸ್‌ನಿಂದ ಪ್ರತಿನಿಧಿಸಿದ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಕಣಕ್ಕಿಳಿಸಿರುವುದು ಅಧೀರ್ ಚೌಧರಿಗೆ ದೊಡ್ಡ ಹೊಡೆತವನ್ನು ನೀಡುವ ಟಿಎಂಸಿಯ ತಂತ್ರದ ಭಾಗವಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅಧೀರ್ ಚೌಧರಿ, ಬಹರಂಪುರ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ನೇಮಿಸುವ ಮೂಲಕ ಮಮತಾ ಬ್ಯಾನರ್ಜಿ ಮೋದಿಗೆ, ನನ್ನ ಬಗ್ಗೆ ಅಸಮಾಧಾನಗೊಳ್ಳಬೇಡಿ, ನಾನು ಬಿಜೆಪಿ ವಿರುದ್ಧ ಹೋರಾಡಲು ನಿಂತಿಲ್ಲ ಎಂದು ಸಂದೇಶ ಕಳುಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನಸಾಮಾನ್ಯರನ್ನು ಧ್ರುವೀಕರಿಸಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಇರ್ಫಾನ್‌ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ, ಇದರಿಂದ ಕಾಂಗ್ರೆಸ್‌ನ್ನು ಸೋಲಿಸಬಹುದು. ಭಾರತದ ಯಾವುದೇ ರಾಜಕೀಯ ಪಕ್ಷಗಳು ತಮ್ಮಂತಹ ನಾಯಕರನ್ನು ನಂಬಬಾರದು ಎಂದು ಮಮತಾ ಬ್ಯಾನರ್ಜಿ ಇಂದು ಸಾಬೀತುಪಡಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಯಲ್ಲಿ ಮುಂದುವರಿದರೆ, ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯದಲ್ಲಿದ್ದಾರೆ. ಇಂಡಿಯಾ ಮೈತ್ರಿಕೂಟದಿಂದ ಬೇರ್ಪಡುವ ಮೂಲಕ ಅವರು ಪಿಎಂಒಗೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಯೂಸುಫ್ ಪಠಾಣ್ ಅವರನ್ನು ಟಿಎಂಸಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಬೇಕಿತ್ತು ಅಥವಾ ಇಂಡಿಯಾ ಬ್ಲಾಕ್ ಮೂಲಕ ಗುಜರಾತ್‌ನಲ್ಲಿ ಸ್ಪರ್ಧೆಗಿಳಿಸಬೇಕಿತ್ತು. ಟಿಎಂಸಿ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರನ್ನು ರಾಜ್ಯಸಭೆಗೆ ಕಳುಹಿಸಬೇಕಿತ್ತು. ಮಮತಾ ಬ್ಯಾನರ್ಜಿ ಅವರಿಗೆ ಯೂಸುಫ್ ಪಠಾಣ್ ಬಗ್ಗೆ ಒಳ್ಳೆಯ ಉದ್ದೇಶವಿದ್ದರೆ, ಅವರಿಗೆ ಇಂಡಿಯಾ ಮೈತ್ರಿಯ ಜೊತೆ ಸ್ಥಾನ ಕೇಳುತ್ತಿದ್ದರು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಟಿಎಂಸಿ 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಹೊಸ ಮುಖಗಳಿವೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬಹ್ರಂಪುರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಟಿಕೆಟ್‌ ಘೋಷಣೆ ಬಳಿಕ ಪಠಾಣ್ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಂಸತ್ತಿನಲ್ಲಿ ಜನರ ಧ್ವನಿಯಾಗುವ ಜವಾಬ್ದಾರಿಯೊಂದಿಗೆ ತನ್ನನ್ನು ನಂಬಿದ್ದಕ್ಕಾಗಿ ಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ, ಜನಪ್ರತಿನಿಧಿಗಳಾಗಿ, ಬಡವರು ಮತ್ತು ವಂಚಿತರನ್ನು ಮೇಲಕ್ಕೆತ್ತುವುದು ನಮ್ಮ ಕರ್ತವ್ಯ ಮತ್ತು ಅದನ್ನು ಸಾಧಿಸುವ ಇರಾದೆಯನ್ನು ತಾನು ಹೊಂದಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಅಧೀರ್‌ ಚೌಧರಿ ಮತ್ತು ಟಿಎಂಸಿ ನಡುವೆ ಈ ಮೊದಲು ಕೂಡ ಜಟಾಪಟಿ ನಡೆದಿತ್ತು. ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ ಕಾರಣ ಎಂದು ಓಬ್ರಿಯಾನ್ ಹೇಳಿದ್ದರು. ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ ಎಂದು ಕೂಡ ಟಿಎಂಸಿ ನಾಯಕರು ಈ ಮೊದಲು ಆರೋಪಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕಿ ಎಂದು ಈ ಮೊದಲು ಕರೆದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮಮತಾ ಇಲ್ಲದೆ ಇಂಡಿಯಾ ಮೈತ್ರಿ ಅಪೂರ್ಣ ಎಂದು ಹೇಳಿಕೊಂಡು ಟಿಎಂಸಿ ಜೊತೆಗಿನ ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನಿಸಿದ್ದರು. ಬಂಗಾಳದಲ್ಲಿ ಕಾಂಗ್ರೆಸ್‌ಗಿಂತ, ಅಧೀರ್‌ ಚೌಧರಿ ವಿರುದ್ಧವೇ ಮಮತಾ ಮುನಿಸಿಕೊಂಡಿದ್ದು, ಅವರ ವಿರುದ್ಧ ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸಲು ಕಾರಣ ಎಂದು ಹೇಳಲಾಗಿದೆ.

ಇದನ್ನು ಓದಿ: ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...