Homeಮುಖಪುಟಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

- Advertisement -
- Advertisement -

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಆರೋಪಿಯಿಂದ ಮಹಿಳೆಯರಿಗೆ ಸಂಬಂಧಿಸಿದ 58 ಆಕ್ಷೇಪಾರ್ಹ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ. ಖಾರಟ್ ಹಲವಾರು ರಾಜಕಾರಣಿಗಳು, ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದನೆಂದು ವರದಿಯಾಗಿದೆ, ಅವರಲ್ಲಿ ಅನೇಕರು ವಿವಿಧ ವಿಷಯಗಳ ಬಗ್ಗೆ ಈತನ ಸಲಹೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಾಕಣಕರ್ ಹಾಗೂ ಡಿಸಿಎಂ ಏಕನಾಥ್ ಶಿಂದೆ ಅವರೊಂದಿಗೆ ಖಾರಟ್ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಒಂದು ವಿಡಿಯೋದಲ್ಲಿ ಚಾಕಣಕರ್ ಅವರು ಭಕ್ತಿಯಿಂದ ಖಾರಟ್ ಅವರ ಕಾಲು ತೊಳೆಯುತ್ತಿರುವುದು ಕಂಡುಬಂದಿದ್ದು, ಮತ್ತೊಂದರಲ್ಲಿ ಅವರನ್ನು ತಮ್ಮ ಗುರು ಎಂದು ಸಂಬೋಧಿಸಿದ್ದಾರೆ. ಅಲ್ಲದೆ, ಖಾರಟ್ ಅಧ್ಯಕ್ಷರಾಗಿರುವ ‘ಶಿವನಿಕ’ ಎಂಬ ಟ್ರಸ್ಟ್‌ನಲ್ಲಿ ಚಾಕಣಕರ್ ಅವರು ಸದಸ್ಯರಾಗಿದ್ದಾರೆ.

ಚಾಕಣಕರ್ ಅವರು ಸಾಮಾಜಿಕ ಕೆಲಸಗಳಿಗಾಗಿ ಶಿವನಿಕ ಟ್ರಸ್ಟ್‌ನ ಸಭೆಗಳಲ್ಲಿ ಭಾಗವಹಿಸುತ್ತಿದ್ದಾಗ ಖಾರಟ್‌ ಅವರ ಸಂಪರ್ಕಕ್ಕೆ ಬಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಅವರ ಮೇಲಿರುವ ಈ ಗಂಭೀರ ಆರೋಪಗಳ ಬಗ್ಗೆ ತಮಗೆ ಅರಿವಿರಲಿಲ್ಲ ಎಂದು ತಿಳಿಸಿರುವ ಅವರು, ಸತ್ಯಾಸತ್ಯತೆಯನ್ನು ಹೊರತರಲು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಖಾರಟ್ ಮಹಿಳೆಯರಿಗೆ ಅಮಲು ಪದಾರ್ಥಗಳನ್ನು ನೀಡಿ, ಅವರನ್ನು ಅಸಭ್ಯವಾಗಿ ಚಿತ್ರೀಕರಿಸಿ, ನಂತರ ಆ ದೃಶ್ಯಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮತ್ತು ಶೋಷಣೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಈತನ ವಿರುದ್ಧ ಅತ್ಯಾಚಾರದ ಆರೋಪಗಳೂ ಕೇಳಿಬಂದಿದ್ದು, ಈಗಾಗಲೇ ಔಪಚಾರಿಕ ದೂರು ದಾಖಲಾಗಿದೆ.

ಹಲವಾರು ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ರಾಜಕಾರಣಿಗಳು ಸಲಹೆಗಾಗಿ ಈತನನ್ನು ಸಂಪರ್ಕಿಸುತ್ತಿದ್ದರು. ಖಾರಟ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ವಿಶ್ವವಿಜ್ಞಾನ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಣಿತನೆಂದು ಗುರುತಿಸಿಕೊಂಡಿದ್ದನು. ಈತ ನಾಸಿಕ್ ಮತ್ತು ಇತರ ಮಹಾನಗರಗಳಲ್ಲಿ ಹಲವಾರು ಎಕರೆ ಭೂಮಿಯನ್ನು ಕೂಡ ಸಂಪಾದಿಸಿದ್ದಾನೆ ಎಂದು ವರದಿಗಳು ವಿವರಿಸಿವೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆ ಅವರು, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ ಮತ್ತು ರೂಪಾಲಿ ಚಾಕಣಕರ್ ಅವರು ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಖಾರಟ್‌ನ ಚಟುವಟಿಕೆಗಳ ಬಗ್ಗೆ ಚಾಕಣಕರ್ ಅವರಿಗೆ ಮೊದಲೇ ತಿಳಿದಿರುವ ಸಾಧ್ಯತೆಯಿದೆ ಮತ್ತು ಅವರು ಆತನಿಗೆ ರಾಜಕೀಯ ರಕ್ಷಣೆ ನೀಡಿರಬಹುದು ಎಂದು ಅಂಧಾರೆ ಆರೋಪಿಸಿದ್ದಾರೆ. ಆದ್ದರಿಂದ ಅವರು ತಕ್ಷಣವೇ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದ್ದಾರೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...