Homeಮುಖಪುಟಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

ಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

- Advertisement -
- Advertisement -

ಒಕ್ಕೂಟ ಸರ್ಕಾರವು ತನ್ನ ಆಸ್ತಿಯನ್ನು ಮಾನಿಟೈಸೇಶನ್‌‌ ಪಾಲಿಸಿಯ ಹೆಸರಿನಲ್ಲಿ ಮಾರಾಟ ಮಾಡಲು ಯೋಜಿಸುತ್ತಿದ್ದು, ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾಗಿರುವ ಎಲ್ಲವನ್ನೂ ಆಯ್ದ ಕೆಲವರ ಕೈಗೆ ಒತ್ತೆ ಇಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಇತ್ತೀಚೆಗೆ, ಅಂದಾಜು 6 ಲಕ್ಷ ಕೋಟಿ ರೂ. ನ್ಯಾಷನಲ್‌‌ ಮಾನಿಟೈಸೇಶನ್‌‌ ಪೈಪ್‌ಲೈನ್ (NMP) ನೀತಿಯನ್ನು ಅನಾವರಣಗೊಳಿಸಿದೆ. ಕಂದಾಯ ಹಕ್ಕುಗಳನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವ ಮೂಲಕ ಬ್ರೌನ್ ಫೀಲ್ಡ್ ಯೋಜನೆಗಳಲ್ಲಿ ಮೌಲ್ಯವನ್ನು ಅನ್ಲಾಕ್ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ. ಆಸ್ತಿಗಳ ಮಾಲೀಕತ್ವವು ಸರ್ಕಾರದಲ್ಲಿ ಉಳಿಯುತ್ತದೆ. ಪಾಲಿಸಿಯ ಮೂಲಕ ಉತ್ಪತ್ತಿಯಾದ ಹಣವನ್ನು ದೇಶದಲ್ಲಿ ಮೂಲಸೌಕರ್ಯ ಸೃಷ್ಟಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಮಾನಿಟೈಸೇಶನ್‌‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಮಾಜಿ ವಿತ್ತ ಸಚಿವರೂ ಆಗಿರುವ ಪಿ. ಚಿದಂಬರಂ ಅವರು ನೀತಿಯ ಕುರಿತು ಸಂಸತ್ತಿನಲ್ಲಿ ಯಾವುದೇ ಸಮಾಲೋಚನೆ ಅಥವಾ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯಾಗಲಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಲಿ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರು, ಸರ್ಕಾರಕ್ಕೆ ಆದಾಯವನ್ನು ಉಂಟುಮಾಡುತ್ತದೆ ಎಂದು ಆಸ್ತಿಗಳನ್ನು ಮಾರಾಟ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ್ದಾರೆ. ಈ ಆಸ್ತಿಗಳು ಗಳಿಸುತ್ತಿರುವ ಆದಾಯವನ್ನು ಒಕ್ಕೂಟ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಯಾಕೆಂದರೆ ಇದನ್ನು ಮಾರಾಟ ಮಾಡುವುದರಿಂದ 1.5 ಲಕ್ಷ ರೂ.ಗಳನ್ನು ಪಡೆಯುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

“ಈ ಆಸ್ತಿಗಳು ಪ್ರಸ್ತುತ ಸುಮಾರು 1.3 ಲಕ್ಷ ಕೋಟಿ ರೂಪಾಯಿಗಳನ್ನು ಗಳಿಸುತ್ತಿವೆ ಎಂದು ನಾನು ನಂಬಿದ್ದೇನೆ. ಆದ್ದರಿಂದ, 70 ವರ್ಷಗಳಲ್ಲಿ ನಿರ್ಮಿಸಲಾದ ಸ್ವತ್ತುಗಳನ್ನು ಕೇವಲ 20,000 ಕೋಟಿ ಲಾಭಕ್ಕಾಗಿ ಮಾರಾಟ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...