Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....