Homeಮುಖಪುಟಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಸಂದೇಶಖಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭತವಸೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ.

ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡ ಬ್ಯಾನರ್ಜಿ, ‘ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ; ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು’ ಎಂದರು.

ಹೌರಾ ಜಿಲ್ಲೆಯ ದುಮುರ್ಜಾಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ‘ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಉತ್ತಮ್ ಸರ್ದಾರ್, ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತ ಸಹಾಯಕರನ್ನು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ತೊಂದರೆ ಸೃಷ್ಟಿಸಿದ್ದಾರೆ ಎಂಬ ದೂರಿನ ಮೇರೆಗೆ ಭಾನುವಾರ ಸಂದೇಶಖಾಲಿಯಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಲು ಬಂದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಶೇಖ್ ತಲೆಮರೆಸಿಕೊಂಡಿದ್ದಾನೆ’ ಎಂದರು.

ಸಂದೇಶಖಾಲಿಯಲ್ಲಿ ಜನರಿಗೆ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ವಿಕಾಸ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಂದೇಶಖಾಲಿ ಸಿಪಿಎಂನ ಮಾಜಿ ಶಾಸಕ ನಿರಪಾದ ಸರ್ದಾರ್ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ರಾಜ್ಯಪಾಲ ಬೋಸ್ ಸಂದೇಶಖಾಲಿಯಲ್ಲಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಂದೇಶಖಾಲಿಯಲ್ಲಿನ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿಯನ್ನು ಅವರು ಈಗಾಗಲೇ ಕೇಳಿದ್ದಾರೆ.

‘ಸಂದೇಶಖಾಲಿಯ ಘಟನೆಗಳ ಆಘಾತಕಾರಿ ಮತ್ತು ಛಿದ್ರಗೊಳಿಸುವ ಕಥೆಗಳನ್ನು ನಾನು ಕೇಳಿದಾಗ, ನಾನು ನನ್ನ ಕೇರಳ ಭೇಟಿಯನ್ನು ಮೊಟಕುಗೊಳಿಸಿದೆ. ನಾನು ಸಂದೇಸ್‌ಖಾಲಿಗೆ ಹೋಗುತ್ತಿದ್ದೇನೆ ಮತ್ತು ಸಂದೇಶ್‌ಖಾಲಿಯ ಗಲ್ಲಿಗಳಿಂದ ನಿಜವಾದ ಸಂದೇಶ ಏನೆಂಬುದನ್ನು ನಾನೇ ನೋಡಲು ಬಯಸುತ್ತೇನೆ’ ಎಂದು ಕಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಬೋಸ್ ಹೇಳಿದರು.

ಸಂದೇಶಖಾಲಿಯ ತೊಂದರೆಗೀಡಾದ ಬೀದಿಗಳಿಗೆ ಭೇಟಿ ನೀಡಿ, ತಲೆಮರೆಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆ ಅನುಭವಿಸಿದ್ದಾರೆ ಎನ್ನಲಾದ ಮಹಿಳೆಯರೊಂದಿಗೆ ಮಾತನಾಡಿದರು. ‘ನನ್ನ ಕೈಗಳ ಮೇಲೆ ರಾಖಿಗಳನ್ನು ಕಟ್ಟಿದ, ಹಿಂಸೆಗೊಳಗಾದ ಮಹಿಳೆಯರಿಗೆ ನ್ಯಾಯ ಪಡೆಯಲು ಎಲ್ಲ ಸಹಾಯ ನೀಡುವುದಾಗಿ’ ರಾಜ್ಯಪಾಲರು ಭರವಸೆ ನೀಡಿದರು.

‘ನಾನು ಕಂಡದ್ದು ಘೋರ, ಆಘಾತಕಾರಿ, ನನ್ನ ಇಂದ್ರಿಯಗಳನ್ನು ಛಿದ್ರಗೊಳಿಸಿತು. ನಾನು ಎಂದಿಗೂ ನೋಡಬಾರದಂತಹದನ್ನು ನೋಡಿದೆ. ನಾನು ಎಂದಿಗೂ ಕೇಳಬಾರದಂತಹ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಇದು ಸಂಭವಿಸಬಹುದೆಂದು ನಾನು ನಂಬಲು ಸಾಧ್ಯವಿಲ್ಲ’ ಎಂದು ಬೋಸ್ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ, ದೇಶದ ಕಾನೂನುಗಳ ಪ್ರಕಾರ ಮತ್ತು ಅವರ ಅಧಿಕಾರದೊಳಗೆ ಏನಿದೆಯೋ ಆ ಪ್ರಕಾರವಾಗಿ ಹೋರಾಟ ಮಾಡಲಾಗುವುದು. ಚಿಂತಿಸಬೇಡಿ.. ನಿಮಗೆ ಖಂಡಿತ ನ್ಯಾಯ ಸಿಗುತ್ತದೆ. ಎಂದು ಬೋಸ್ ಸ್ಥಳೀಯ ಮಹಿಳೆಯರಿಗೆ ಹೇಳಿದ್ದಾರೆ.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...