Homeಮುಖಪುಟಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

- Advertisement -
- Advertisement -

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ​​ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಗೆಲುವು ಸಾಧಿಸಿದ್ದಾರೆ.

ಸಿಬಲ್ 1,066 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರೈ 689 ಮತಗಳನ್ನು ಪಡೆದಿದ್ದಾರೆ. ಮರು ಆಯ್ಕೆ ಬಯಸಿದ್ದ ನಿರ್ಗಮಿತ ಅಧ್ಯಕ್ಷ, ಹಿರಿಯ ವಕೀಲ ಡಾ ಆದಿಶ್ ಸಿ ಅಗರ್ವಾಲ್ ಅವರ ಪರ 296 ಮತಗಳು ಚಲಾವಣೆಯಾಗಿತ್ತು.

ಪ್ರಿಯಾ ಹಿಂಗೋರಾಣಿ, ತ್ರಿಪುರಾರಿ ರೈ, ನೀರಜ್ ಶ್ರೀವಾಸ್ತವ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಸಿಬಲ್ ಅವರು ಎಸ್‌ಸಿಬಿಎ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಇದು ನಾಲ್ಕನೇ ಬಾರಿಯಾಗಿದೆ. ಸಿಬಲ್ ಜೊತೆ ಉಪಾಧ್ಯಕ್ಷರಾಗಿ ರಚನಾ ಶ್ರೀವಾಸ್ತವ್ ಮತ್ತು ಕಾರ್ಯದರ್ಶಿಯಾಗಿ ವಿಕ್ರಾಂತ್ ಯಾದವ್ ಆಯ್ಕೆಯಾಗಿದ್ದಾರೆ.

ಸಿಬಲ್ ಈ ಹಿಂದೆ ಎಸ್‌ಸಿಬಿಎ ಅಧ್ಯಕ್ಷರಾಗಿ ಮೂರು ಬಾರಿ ಚುನಾಯಿತರಾಗಿದ್ದರು. ಕೊನೆಯದಾಗಿ 23 ವರ್ಷಗಳ ಹಿಂದೆ, ಅಂದರೆ 2001ರಲ್ಲಿ ಅವರು ಎಸ್‌ಬಿಎ ಅಧ್ಯಕ್ಷರಾಗಿದ್ದರು. ಅದಕ್ಕೂ ಮುನ್ನ 1995-96 ಮತ್ತು 1997-98 ಅವಧಿಯಲ್ಲೂ ಅವರು ಈ ಸ್ಥಾನಕ್ಕೆ ಆಯ್ಕೆಯಾಗಿದ್ದರು.

ನಿರ್ಗಮಿತ ಅಧ್ಯಕ್ಷ ಆದಿಶ್ ಅಗರ್ವಾಲ್ ಇತ್ತೀಚೆಗೆ ‘ಚುನಾವಣಾ ಬಾಂಡ್’ ವಿಚಾರದಲ್ಲಿ ಸುದ್ದಿಯಾಗಿದ್ದರು. ಮೋದಿ ಸರ್ಕಾರದ ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ, ಬಾಂಡ್ ಮಾಹಿತಿಗಳನ್ನು ಸಾರ್ವಜನಿಕಗೊಳಿಸುವಂತೆ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಈ ಆದೇಶದ ವಿರುದ್ದ ರಾಷ್ಟ್ರಪತಿಗೆ ಪತ್ರ ಬರೆದಿದ್ದ ಆದಿಶ್ ಅಗರ್ವಾಲ್ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದರು. ಈ ವಿಚಾರಕ್ಕೆ ಸುಪ್ರೀಂ ಕೋರ್ಟ್ ಅಗರ್ವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಎಸ್‌ಬಿಎ ಕಾರ್ಯದರ್ಶಿ ಪ್ರಕಟನೆ ಹೊರಡಿಸಿ, “ಅಗರ್ವಾಲ್‌ ಬರೆದ ಪತ್ರಕ್ಕೂ ನಮಗೂ ಸಂಬಂಧವಿಲ್ಲ” ಎಂದಿದ್ದರು.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್, ಎಎಪಿ ವಿರುದ್ಧ ಶೀಘ್ರದಲ್ಲೇ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗುವುದು: ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...