Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...