Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...