Homeಮುಖಪುಟಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಯುಪಿಯ ಅಕ್ರಮ ಹಾದಿಯಲ್ಲಿ ಸಾಗದಿರಲಿ"

- Advertisement -
- Advertisement -

“ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ” ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಕ್ರವಾರ (ಡಿಸೆಂಬರ್ 12) ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಮಾದಕವಸ್ತು ಮಾರಾಟಗಾರರ ಮನೆಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಬಹುದು ಎಂಬ ಕರ್ನಾಟಕದ ಗೃಹ ಸಚಿವರ ವರದಿಯ ಬಗ್ಗೆ ನನಗೆ ಆತಂಕವಾಗಿದೆ. ಈ ವರದಿ ಸುಳ್ಳಾಗಿರಲಿ ಎಂಬುದು ನನ್ನ ನಿರೀಕ್ಷೆ” ಎಂದಿದ್ದಾರೆ.

“ಕಾನೂನಿನ ಸರಿಯಾದ ಪ್ರಕ್ರಿಯೆಯಿಲ್ಲದೆ ಮನೆಗಳನ್ನು ಕೆಡವುವುದು ಕಾನೂನುಬಾಹಿರ ಮತ್ತು ಕುಟುಂಬದ ಇತರ ಸದಸ್ಯರ ಮೂಲಭೂತ ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ, ಯುಪಿಯಲ್ಲಿ ಆಚರಣೆಯಲ್ಲಿರುವ ‘ಬುಲ್ಡೋಜರ್ ನ್ಯಾಯ’ ತಪ್ಪು, ಕಾನೂನುಬಾಹಿರ ಮತ್ತು ಅನ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ದೃಷ್ಟಿಕೋನವಾಗಿದೆ. ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಯುಪಿಯ ಅಕ್ರಮ ಹಾದಿಯಲ್ಲಿ ಸಾಗದಿರಲಿ” ಎಂದು ಚಿದಂಬರಂ ಬರೆದುಕೊಂಡಿದ್ದಾರೆ.

ಗುರುವಾರ (ಡಿಸೆಂಬರ್ 11) ವಿಧಾನಪರಿಷತ್‌ನಲ್ಲಿ ಮಾತನಾಡಿದ್ದ ಗೃಹ ಸಚಿವ ಜಿ. ಪರಮೇಶ್ವರ್, ಆಫ್ರಿಕಾದ ಅನೇಕ ವಿದ್ಯಾರ್ಥಿಗಳು ಇಲ್ಲಿಗೆ ಡ್ರಗ್ಸ್ ದಂಧೆ ಮಾಡುತ್ತಿದ್ದಾರೆ. ಅವರನ್ನು ನಾವು ಬಂಧಿಸುತ್ತೇವೆ, ಪ್ರಕರಣ ದಾಖಲಿಸುತ್ತೇವೆ. ಬಂಧನ ಆಗಬೇಕೆಂದೇ ಅವರು ಬಯಸುತ್ತಿದ್ದಾರೆ. ಕಾರಣ ಬಂಧನ ಆದರೆ, ಅವರನ್ನು ನಾವು ಅವರ ದೇಶಕ್ಕೆ ಕಳುಹಿಸಲು ಆಗುವುದಿಲ್ಲ ಎಂದು ಹೇಳಿದ್ದರು.

ಕಳೆದ ಎರಡು ವರ್ಷಗಳಲ್ಲಿ ನಾವು ಸುಮಾರು 300 ಜನ ವಿದೇಶಿ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಿದ್ದೇವೆ. ಗಡಿಪಾರು ಮಾಡಲೂ ಹೆಚ್ಚಿನ ಪ್ರಕ್ರಿಯೆಗಳಿವೆ. ಹಾಗಾಗಿ, ನಾವು ಪ್ರತಿನಿತ್ಯ ಈ ಡ್ರಗ್ಸ್ ದಂಧೆಯ ಬಗ್ಗೆ ನಿಗಾ ಇಟ್ಟಿದ್ದೇವೆ. ದಂಧೆಕೋರರಿಗೆ ಬಾಡಿಗೆಗೆ ಮನೆ ಕೊಟ್ಟವರ ಮೇಲೂ ಕ್ರಮ ಕೈಗೊಂಡಿದ್ದೇವೆ. ಇತ್ತೀಚೆಗೆ ಬಾಡಿಗೆ ಮನೆಯನ್ನು ಒಡೆದು ಹಾಕುವ ಹಂತಕ್ಕೂ ಹೋಗಿದ್ದೇವೆ. ಬಹಳ ಕಠಿಣ ಕ್ರಮವನ್ನು ಈ ಡ್ರಗ್ಸ್ ವಿಚಾರದಲ್ಲಿ ನಾವು ತೆಗೆದುಕೊಳ್ಳುತ್ತಿದ್ದೇವೆ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...