Homeಮುಖಪುಟಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

- Advertisement -
- Advertisement -

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಮನೆಯಿಂದ ಮಂಗಳವಾರ (ಫೆ.11) ಬೆಳಿಗ್ಗೆ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಂಬೆಮ್ ಅವರನ್ನು ಬಂದೂಕು ತೋರಿಸಿ ಅಪಹರಿಸಿದ್ದರು, ಬಳಿಕ ಬಿಡುಗಡೆ ಮಾಡಿದ್ದಾರೆ.

ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಲಾಬಾ ಯಂಬೆಮ್ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪೊಲೀಸರು ಕುಟುಂಬದ ಜೊತೆ ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ಫೆ.9) ಮಣಿಪುರ ಸಿಎಂ ಬಿರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪತ್ರಕರ್ತ ಯಂಬೆಮ್ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ್ದರು. ಅಲ್ಲಿಂದ ಹಿಂದಿರುಗಿದ ಕೆಲವೇ ಗಂಟೆಗಳಲ್ಲಿ ಯಂಬೆಮ್ ಅವರನ್ನು ಅಪಹರಿಸಲಾಗಿದೆ ಎಂದು ಅವರ ಹಿರಿಯ ಸಹೋದರ, ನಿವೃತ್ತ ಸೇನಾ ಮೇಜರ್ ಯಂಬೆಮ್ ಅಂಗಂಬಾ ಹೇಳಿದ್ದಾರೆ.

69 ವರ್ಷದ ಲಾಬಾ ಯಂಬೆಮ್ ಅವರು ರಾಷ್ಟ್ರೀಯ ಇಂಗ್ಲಿಷ್ ದಿನಪತ್ರಿಕೆ ಸ್ಟೇಟ್ಸ್‌ಮನ್‌ನ ವಿಶೇಷ ವರದಿಗಾರರಾಗಿದ್ದು, ಬೆಳಗಿನ ಜಾವ 3:30 ರ ಸುಮಾರಿಗೆ 15 ರಿಂದ 20 ಮಂದಿ ಬಂದೂಕುಧಾರಿಗಳ ಗುಂಪೊಂದು ಅವರನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿತ್ತು ಎಂದು ಅಂಗಂಬಾ ವಿವರಿಸಿದ್ದಾರೆ.

ಎರಡು ದಿನಗಳ ಹಿಂದೆ ಲಾಬಾ ಅವರ ಮನೆ ಮೇಲೆ ಬಂಡುಕೋರರು ಗುಂಡಿನ ದಾಳಿ ನಡೆಸಿ, ಅವರನ್ನು ಟೀಕಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ಡಿಲಿಟ್ ಮಾಡುವಂತೆ ಸೂಚಿಸಿದ್ದರು. ಅದಾಗಿ ಎರಡು ದಿನಗಳ ನಂತರ ಅವರ ಅಪಹರಣ ನಡೆದಿದೆ.

ಲಾಬಾ ಅವರು ಮಣಿಪುರ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯರಾಗಿದ್ದಾರೆ.

“ಬಹುಶಃ ಲಾಬಾ ಅವರನ್ನು ಅಪಹರಿಸಿದವರಿಗೆ ಅವರ ಹೇಳಿಕೆ ತೃಪ್ತಿಯಾಗದೇ ಇರಬಹುದು. ಆದರೆ, ಅವರು ಹೇಳಿದ್ದೆಲ್ಲವೂ ಪತ್ರಕರ್ತರ ನೈತಿಕತೆಗೆ ಅನುಗುಣವಾಗಿತ್ತು. ಪತ್ರಕರ್ತನಿಗೆ ಸಮಾಜ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಬರೆಯಲು ಮತ್ತು ಮಾತನಾಡಲು ಹಕ್ಕಿದೆ” ಎಂದು ಸಹೋದರ ಅಂಗಂಬಾ ಹೇಳಿದ್ದಾರೆ. ಕುಟುಂಬಸ್ಥರು ಎಫ್‌ಐಆರ್ ದಾಖಲಿಸಿದ ನಂತರ ಮಂಗಳವಾರ ಬೆಳಿಗ್ಗೆ ಪೊಲೀಸರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ಅಂಗಂಬಾ ತಿಳಿಸಿದ್ದಾರೆ.

” ಈ ಹಿಂದೆಯೂ ಲಾಬಾ ಅವರ ಮನೆಯ ಮೇಲೆ ದಾಳಿ ನಡೆದಿತ್ತು. ಮಣಿಪುರದ ಕೆಲವು ಶಕ್ತಿಗಳು ಪತ್ರಕರ್ತರು ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಕೆಲಸ ಮಾಡುವುದನ್ನು ಇಷ್ಟಪಡುವುದಿಲ್ಲ ಎಂದು ತೋರುತ್ತದೆ” ಎಂದು ಅಂಗಂಬಾ ಹೇಳಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಮಣಿಪುರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಮಧ್ಯೆ ಈ ಘಟನೆ ನಡೆದಿದೆ. ಸಂಘರ್ಷ ಪೀಡಿತ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಪ್ಪಿಸಲು ಮತ್ತು ಬಿರೇನ್ ಅವರನ್ನು ಬದಲಿಸಲು ಬಿಜೆಪಿ ಒಮ್ಮತದ ಅಭ್ಯರ್ಥಿಯನ್ನು ಹುಡುಕುತ್ತಿದೆ.

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...