Homeಕರೋನಾ ತಲ್ಲಣಕೊರೊನಾದಿಂದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ನಿಧನ

ಕೊರೊನಾದಿಂದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ನಿಧನ

- Advertisement -
- Advertisement -

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಬಿ.ಎಸ್ ಯಡಿಯೂರಪ್ಪನವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್‌ರವರು ಇಂದು ನಿಧನರಾಗಿದ್ದಾರೆ.

65 ವರ್ಷದ ಮಹಾದೇವ ಪ್ರಕಾಶ್‌ರವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚೇತರಿಸಿಕೊಳ್ಳದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

“ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನನ್ನ ಆತ್ಮೀಯರೂ, ಹಿರಿಯ ಪತ್ರಕರ್ತರು, ರಾಜಕೀಯ ವಿಶ್ಲೇಷಕರು ಹಾಗೂ ಅಂಕಣಕಾರರಾದ ಶ್ರೀ ಮಹಾದೇವ ಪ್ರಕಾಶ್ ಅವರು ನಮ್ಮನ್ನಗಲಿದ್ದಾರೆ ಅನ್ನುವ ಸುದ್ದಿ ಕೇಳಿ ಆಘಾತವಾಗಿದೆ. ಶ್ರೀಯುತರು ಪ್ರಚಲಿತ ರಾಜಕೀಯ ವಿಚಾರಗಳನ್ನು ತಮ್ಮ ಅಂಕಣಗಳ ಮೂಲಕ ವಿಶ್ಲೇಷಣೆ ಮಾಡುತ್ತಿದ್ದ ಶೈಲಿ ನನ್ನನ್ನೂ ಸೇರಿದಂತೆ ಅಪಾರ ಓದುಗರ ವರ್ಗವನ್ನು ಇವರ ಅಭಿಮಾನಿಯನ್ನಾಗಿಸಿತ್ತು. ಇವರ ಅಗಲುವಿಕೆ ವೈಯುಕ್ತಿಕವಾಗಿ ನನಗೆ, ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅಗಲಿದ ಅವರಾತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸೋಣ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

0
ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ನಿರ್ವಹಿಸುತ್ತಿರುವ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನನ್ನು ಡಿಎಂಕೆ ಒಕ್ಕೂಟದ ಕಾರ್ಯದರ್ಶಿಯೊಬ್ಬರು ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ತಮಿಳುನಾಡಿನ ತಿರುಮಲೈಗಿರಿ (ಸೇಲಂ ಜಿಲ್ಲೆ)ಯಲ್ಲಿರುವ...