Homeಮುಖಪುಟಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

- Advertisement -
- Advertisement -

ಅದಾನಿ ಗ್ರೂಪ್‌ ದೇಶದ ಖ್ಯಾತ ಮಾಧ್ಯಮ ಸಂಸ್ಥೆಯಾದ ಎನ್‌ಡಿಟಿವಿಯನ್ನು ತನ್ನ ಸ್ವಾಧೀನ ಮಾಡಿದ ನಂತರ ಅಲ್ಲಿನ ಹಿರಿಯ ಪತ್ರಕರ್ತರು ಮತ್ತು ಅಧಿಕಾರಿಗಳು ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೇ ಸಮಯದಲ್ಲಿ ಸಂಸ್ಥೆಯು ಮತ್ತೊಬ್ಬ ಹಿರಿಯ ಪತ್ರಕರ್ತನನ್ನು ಕಳೆದುಕೊಂಡಿದೆ. ಎನ್‌ಡಿಟಿವಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಚಾನೆಲ್‌ಗೆ ರಾಜೀನಾಮೆ ನೀಡಿದ್ದಾಗಿ ಶನಿವಾರ ಘೋಷಿಸಿದ್ದಾರೆ.

ಎನ್‌ಡಿಟಿವಿ ಚಾನೆಲ್‌ನ ಗ್ರೂಪ್ ಎಡಿಟರ್ ಆಗಿದ್ದ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. “ಎಲ್ಲರಿಗೂ ನಮಸ್ಕಾರ. ಎನ್‌ಡಿಟಿವಿಯಲ್ಲಿನ ಅದ್ಭುತ ಮತ್ತು ಸುಮಾರು ಮೂರು ದಶಕಗಳ ಸುದೀರ್ಘ ಓಟ ಇಂದು ಕೊನೆಗೊಳ್ಳುತ್ತದೆ. ರಾಜೀನಾಮೆ ನಿರ್ಧಾರ ಸುಲಭವಲ್ಲ, ಆದರೆ……it is what it is. ಮತ್ತಷ್ಟು ನಂತರ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀನಿವಾಸನ್‌ ಜೈನ್ ಅವರು 1995 ರಿಂದ ಎನ್‌ಡಿಟಿವಿ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಎನ್‌ಡಿಟಿವಿ24×7 ನಲ್ಲಿ ಪ್ರತಿವಾರ ಪ್ರಸಾರವಾಗುವ ‘ಟ್ರೂತ್ ವರ್ಸಸ್ ಹೈಪ್’ ಎಂಬ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು.

2003 ರಿಂದ 2008ರ ವರೆಗೆ ಎನ್‌ಡಿಟಿವಿ ನೆಟ್‌ವರ್ಕ್‌ನ ಮುಂಬೈ ಬ್ಯೂರೋ ಮುಖ್ಯಸ್ಥರಾಗಿದ್ದರು. ಇದರ ನಂತರ ಅವರು NDTV ಯ ವ್ಯವಹಾರ ಚಾನೆಲ್ ಆದ ಪ್ರಾಫಿಟ್‌ನ ವ್ಯವಸ್ಥಾಪಕ ಸಂಪಾದಕರಾಗಿ ಕೂಡಾ ಕೆಲಸ ಮಾಡಿದ್ದರು. ಇಷ್ಟೆ ಅಲ್ಲದೆ ‘ಬಿಸಿನೆಸ್ ಸ್ಟ್ಯಾಂಡರ್ಡ್‌’ ಪತ್ರಿಕೆಗೆ ಅವರು ಅಂಕಣಗಳನ್ನು ಸಹ ಬರೆದಿದ್ದಾರೆ. ತಮ್ಮ ಮುಂದಿನ ವೃತ್ತಿಜೀವನದ ನಡೆಯ ಬಗ್ಗೆ ಅವರು ಪ್ರಕಟಿಸಿಲ್ಲ.

2022 ರ ನವೆಂಬರ್‌ನಲ್ಲಿ NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರವೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ಎನ್‌ಡಿಟಿವಿಯಲ್ಲಿನ ತಮ್ಮ ಹೆಚ್ಚಿನ ಷೇರುಗಳನ್ನು ಗೌತಮ್ ಅದಾನಿ ಅವರ ಎಎಂಜಿ ಮೀಡಿಯಾ ನೆಟ್‌ವರ್ಕ್‌ಗೆ ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...