ಕನ್ನಡದ ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ (ಎಚ್‌ಎಸ್‌ವಿ) ಅವರು ಶುಕ್ರವಾರ (ಮೇ.30) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ 80 ವರ್ಷ ವಯಸ್ಸಿನ ಎಚ್‌ಎಸ್‌ವಿ, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.
1944ರ ಜೂನ್ 23ರಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ವೆಂಕಟೇಶಮೂರ್ತಿ ಅವರ ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ.
ಎಚ್‌ಎಸ್‌ವಿ ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕರಾಗಿದ್ದರು. ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.
ಎಚ್‌ಎಸ್‌ವಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ ಪದವಿ ಪಡೆದಿದ್ದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಅವರ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ದೊರೆತಿತ್ತು.
ಎಷ್ಟೊಂದು ಮುಗಿಲು, ಒಣಮರದ ಗಿಳಿಗಳು, ಅಮೆರಿಕಾದಲ್ಲಿ ಬಿಲ್ಲುಹಬ್ಬ, ಕ್ರಿಯಾಪರ್ವ, ನದಿತೀರದಲ್ಲಿ, ಉತ್ತರಾಯಣ ಮತ್ತು ಕನ್ನಡಿಯ ಸೂರ್ಯ, ವೈದೇಹಿ ಮತ್ತು ಇತರ ಕವನಗಳು ಎಚ್‌ಎಸ್‌ವಿ ಅವರ ಪ್ರಮುಖ ಕಾವ್ಯಕೃತಿಗಳು
ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಸೇರಿ ವಿವಿಧ ನಾಟಕಗಳು, ತಾಪಿ, ಅಮಾನುಷರು, ಕದಿರನಕೋಟೆ, ಅಗ್ನಿಮುಖಿ, ವೇದವತಿ ನದಿಯಲ್ಲ ಕಾದಂಬರಿಗಳನ್ನು ಅವರು ರಚಿಸಿದ್ದಾರೆ.
ಎಚ್‌ಎಸ್‌ವಿ ಕಲಬುರಗಿಯಲ್ಲಿ ನಡೆದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಸಂದಿವೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು


