Homeಕರ್ನಾಟಕಕಾರ್ಮಿಕರ ಪರ ಮಾತ್ರವೇ ವಕಾಲತ್ತು ವಹಿಸುತ್ತಿದ್ದ ಹಿರಿಯ ನ್ಯಾಯವಾದಿ ಕೆ.ಸುಬ್ಬರಾವ್ ನಿಧನ

ಕಾರ್ಮಿಕರ ಪರ ಮಾತ್ರವೇ ವಕಾಲತ್ತು ವಹಿಸುತ್ತಿದ್ದ ಹಿರಿಯ ನ್ಯಾಯವಾದಿ ಕೆ.ಸುಬ್ಬರಾವ್ ನಿಧನ

- Advertisement -
- Advertisement -

ಯಾವುದೇ ಮಾಲೀಕರ ಒಂದೂ ಕೇಸ್‌ಗಳನ್ನು ಪಡೆಯದೇ ಕೇವಲ ಕಾರ್ಮಿಕರ ಪರವಾಗಿ ಮಾತ್ರವೇ ವಾದ ಮಂಡಿಸುತ್ತಿದ್ದ ಹಿರಿಯ ನ್ಯಾಯವಾದಿ ಕೆ.ಸುಬ್ಬರಾವ್ ನಿಧನ ಹೊಂದಿದ್ದಾರೆ. 92 ವಯಸ್ಸಿನ ಅವರು ವಯೋಸಹಜ ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ.

ಪುತ್ತೂರು ತಾಲೂಕಿನ ಮಣಿಲ ಗ್ರಾಮದ ಕುಟುಂಬದಲ್ಲಿ 1931 ಜೂನ್ 15 ರಂದು ಜನಿಸಿದ್ದ ಅವರು ಕಾನೂನಿನ ಅಧ್ಯಯನ ಮಾಡಿ ಸುಮಾರು ಆರು ದಶಕಗಳ ಕಾಲ ದುಡಿಯುವವರ ಪರವಾಗಿ ಕೆಲಸ ಮಾಡಿದ್ದರು.

1964 ರಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಕಾರ್ಮಿಕರ ಸಂಘದ ಕಾನೂನು ಸಲಹೆಗಾರರಾಗಿ, ನಂತರ ಹೆಚ್.ಎಂ.ಟಿ, ಬಿ.ಇ.ಎಲ್, ಎಚ್.ಎ.ಎಲ್, ಐ.ಟಿ.ಐ ನಂತಹ ಬೃಹತ್ ಸಾರ್ವಜನಿಕ ಉದ್ದಿಮೆಗಳ ಕಾರ್ಮಿಕರ ಪರವಾಗಿ ದುಡಿದಿದ್ದರು. ಇಂಡಿಯನ್ ಕಾಫಿ ವರ್ಕರ್ಸ್ ಕೋ-ಆಪರೇಟಿವ್ ಯೂನಿಯನ್, ಮೈಸೂರು ಕಮರ್ಷಿಯಲ್ ಎಂಪ್ಲಾಯಿಸ್ ಯೂನಿಯನ್, ಬಿನ್ನಿಮಿಲ್ ಕಾರ್ಮಿಕರ ಸಂಘ, ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಅಸೋಶಿಯೇಶನ್ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು.

1986 ರಲ್ಲಿ ನ್ಯೂಯಾರ್ಕ್ ನಲ್ಲಿ ನಡೆದ ‘ಅಂತರಾಷ್ಟ್ರೀಯ ಕಾನೂನು ಸಮ್ಮೇಳನ’ದಲ್ಲಿ ಭಾರತವನ್ನು ಪ್ರತಿನಿಧಿಸಿ ಭಾಗವಹಿಸಿದ್ದರು. ಕಾಸರಗೋಡಿನ ಗ್ರಾಮವೊಂದರಲ್ಲಿ ಕನ್ನಡ ಶಾಲೆ ಸ್ಥಾಪಿಸಿ ಕನ್ನಡ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಿದ್ದರು. ಅಲ್ಲಿ ಸಾಮಾಜಿಕ ಬದಲಾವಣೆಯ ಕೇಂದ್ರವನ್ನು ಸ್ಥಾಪಿಸಲು ತಮ್ಮ 2.3 ಎಕರೆ ಭೂಮಿಯನ್ನು ದಾನ ಮಾಡಿ, ಟ್ರಸ್ಟ್ ಒಂದನ್ನು ಸ್ಥಾಪಿಸಿ ಮಾದರಿಯಾಗಿದ್ದರು.

ಅಖಿಲ ಭಾರತ ವಕೀಲರ ಒಕ್ಕೂಟ( ಎ.ಐ.ಎಲ್.ಯು) ಕರ್ನಾಟಕ ರಾಜ್ಯ ಸಮಿತಿಯು ಕೆ.ಸುಬ್ಬರಾವ್‌ರವರಿಗೆ  ಶ್ರದ್ಧಾಂಜಲಿ ಸಲ್ಲಿಸಿದೆ. ಎ.ಐ.ಎಲ್.ಯು ರಾಜ್ಯ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸಕುಮಾರ್, ದಕ್ಷಿಣ ಭಾರತ ಸಂಚಾಲಕರಾದ ರಾಮಚಂದ್ರರೆಡ್ಡಿ, ರಾಜ್ಯ ಮುಖಂಡರಾದ ಶಿವಾರೆಡ್ಡಿ, ಶಿವಶಂಕರಪ್ಪ, ಎಲ್.ಎಂ.ಪೇಶ್ವಾ, ಶರಣಬಸವ ಮರದ್, ಹುಳ್ಳಿ ಉಮೇಶ್, ರಮೇಶ್ ಪಿಎಸ್, ರವಿ.ಜಿ.ಎನ್, ಸೇರಿದಂತೆ ಎ.ಐ.ಎಲ್.ಯು ಮುಖಂಡರು ಗೌರವ ನಮನ‌ ಸಲ್ಲಿಸಿದರು.

ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಶ್ರೀನಿವಾಸ ವೈದ್ಯ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...