HomeಅಂಕಣಗಳುKarnataka against SIRಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

- Advertisement -
- Advertisement -

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿ, ‘SIR’ ವಿರೋಧಿ ಜನಜಾಗೃತಿ ಜಾಥಾವನ್ನು ಸ್ವಾಗತಿಸಿ ಅವರು ಮಾತನಾಡಿದರು.

ಮತದಾರರ ಜಾಗೃತಿ ಅಗತ್ಯ: ಶ್ರೀಪಾಲ್

“ಪ್ರಸ್ತುತ ಚುನಾವಣಾ ಆಯೋಗದ ಕೆಲವು ನಿರ್ಧಾರಗಳು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವ ಆತಂಕ ಮೂಡಿಸುತ್ತಿವೆ. ದೇಶದ ಬಹುಸಂಖ್ಯಾತ ಜನಸಾಮಾನ್ಯರನ್ನು ಮುಖ್ಯವಾಹಿನಿಯಿಂದ ದೂರವಿಡುವಂತಹ ಪ್ರಕ್ರಿಯೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಈ ವ್ಯವಸ್ಥೆಯ ಸಾಧಕ-ಬಾಧಕಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ,” ಎಂದು ವಕೀಲ ಶ್ರೀಪಾಲ್ ಅಭಿಪ್ರಾಯಪಟ್ಟರು.

ವಾರ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸಲು ಸಲಹೆ

ಮುಖಂಡರಾದ ಕೆ. ರಾಘವೇಂದ್ರ ಮಾತನಾಡಿ, “ಆರಂಭದಲ್ಲಿ ನಮಗೆ ಈ ವಿಷಯದ ತೀವ್ರತೆಯ ಬಗ್ಗೆ ಸಂಪೂರ್ಣ ಮಾಹಿತಿ ಇರಲಿಲ್ಲ. ಆದರೆ ಈ ಜಾಗೃತಿ ಜಾಥಾ ಆರಂಭವಾದ ಬಳಿಕ ವಿಷಯದ ಗಂಭೀರತೆ ಅರ್ಥವಾಗಿದೆ. ಪ್ರತಿಯೊಬ್ಬ ನಾಗರಿಕನಿಗೂ ಇದರ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದೆ,” ಎಂದರು.

ಮತ್ತೊಬ್ಬ ವಕೀಲರಾದ ಷಹರಾಜ್ ಮುಜಾಹಿದ್ ಸಿದ್ದಿಕಿ ಮಾತನಾಡಿ, “ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದವರ ಹೆಸರುಗಳಲ್ಲಿ ತಾಂತ್ರಿಕವಾಗಿ ಹಲವು ವ್ಯತ್ಯಾಸಗಳಿರುತ್ತವೆ. ಇದರಿಂದಾಗಿ ಅವರ ಮತದಾನದ ಹಕ್ಕು ಕೈತಪ್ಪುವ ಆತಂಕವಿದೆ. ಈ ಗೊಂದಲಗಳನ್ನು ನಿವಾರಿಸಲು ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕಿದೆ,” ಎಂದು ಸಲಹೆ ನೀಡಿದರು.

ಮುಖಂಡರಾದ ಅಫ್ತಬ್ ಫರ್ವೇಜ್ ಮಾತನಾಡಿ, ರಾಜಕೀಯ ಪಕ್ಷಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ, ಪ್ರಗತಿಪರ ಸಂಘಟನೆಗಳು ಮತ್ತು ನಾಗರಿಕ ಸಮಾಜವೇ ಮುಂಚೂಣಿಗೆ ಬಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಹೊರಬೇಕಾಗಿದೆ ಎಂದು ತಿಳಿಸಿದರು.

ಈ ಜನಜಾಗೃತಿ ಜಾಥಾವು ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ತರೀಕೆರೆ ಹಾಗೂ ಭದ್ರಾವತಿಯಲ್ಲಿ ಸಭೆಗಳನ್ನು ಯಶಸ್ವಿಯಾಗಿ ಮುಗಿಸಿ ಶಿವಮೊಗ್ಗ ನಗರಕ್ಕೆ ಆಗಮಿಸಿತು. ತದನಂತರ ನಗರದ ಪತ್ರಿಕಾ ಭವನದಲ್ಲಿ ದುಂಡುಮೇಜಿನ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಪ್ರಮುಖ ಮುಖಂಡರಾದ ಕೆ. ರಂಗನಾಥ್, ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು ಹಾಗೂ ಸುಮಂತ್ ರಾಜೀತ್ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...