Homeಮುಖಪುಟಕಾಂಗ್ರೆಸ್ ಪಕ್ಷ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ಕಾಂಗ್ರೆಸ್ ಪಕ್ಷ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್

- Advertisement -
- Advertisement -

ನಿನ್ನೆ ತಾನೇ ಆರೋಗ್ಯ ಸಮಸ್ಯೆಯ ಕಾರಣ ಮುಂದಿಟ್ಟು ಜಮ್ಮು ಕಾಶ್ಮೀರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿಗಳಿಂದ ಹೊರಬಂದಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಎಲ್ಲಾ ಘಟಕಗಳಿಗೆ ರಾಜೀನಾಮೆ ನೀಡಿದ್ದಾರೆ.

5 ಪುಟಗಳ ಸುಧೀರ್ಘ ರಾಜೀನಾಮೆ ಪತ್ರವನ್ನು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿರುವ ಅಜಾದ್, ಹಲವು ದಶಕಗಳ ಕಾಲದ ಕಾಂಗ್ರೆಸ್‌ ಜೊತೆಗಿನ ನಂಟು ಕಡಿದುಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಪದೇ ಪದೇ ಮುಂದುಡುತ್ತಿರುವುದನ್ನು ಖಂಡಿಸಿರುವ ಅವರು, “ಯಾವುದೇ ಸಂಘಟನೆಯ ಆಂತರೀಕ ಚುನಾವಣೆ ಈ ರೀತಿ ನಡೆಯುವುದಿಲ್ಲ. ಆದರೆ ಕಾಂಗ್ರೆಸ್‌ನಲ್ಲಿ ಮಾತ್ರ 24 ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಕೂತು ನಾಯಕನನ್ನು ಆರಿಸಲಾಗುತ್ತದೆ ಮತ್ತು ಇತರರಿಂದ ಒಪ್ಪಿಗೆ ಪಡೆಯಲಾಗುತ್ತದೆ” ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ 08 ವರ್ಷಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮತ್ತು ರಾಜ್ಯಗಳಲ್ಲಿ ಸ್ಥಳೀಯ ಪಕ್ಷಗಳಿಗೆ ಅಧಿಕಾರ ಕೊಟ್ಟು ಸುಮ್ಮನಾಗಿದೆ. ನಾಯಕತ್ವದ ಸಾಮರ್ಥ್ಯವಿಲ್ಲದ, ಗಂಭೀರತೆಯಿಲ್ಲದೆ ವ್ಯಕ್ತಿ ಕೈಗೆ ಪಕ್ಷದ ಚುಕ್ಕಾಣಿ ನೀಡಿದ್ದೆ ಇದಕ್ಕೆ ಕಾರಣ ಎಂದು ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸಿದೆ ಟೀಕಿಸಿದ್ದಾರೆ.

ಗುಲಾಂ ನಬಿ ಆಜಾದ್ ಕಳೆದ ಎರಡು ವರ್ಷಗಳಿಂದ ಪಕ್ಷದ ನಾಯಕತ್ವದ ವಿರುದ್ಧ ಭಿನ್ನಾಭಿಪ್ರಾಯ ಹೊಂದಿದ್ದರು ಮತ್ತು G-23 ಎನ್ನುವ “ಭಿನ್ನಮತೀಯರ” ಗುಂಪಿನ ಪ್ರಮುಖ ಸದಸ್ಯರಾಗಿದ್ದರು. ಸಂಘಟನೆಯ ಸಂಪೂರ್ಣ ಬದಲಾವಣೆ ಮತ್ತು ಬಲಿಷ್ಟ ನಾಯಕತ್ವ ಬೇಕೆಂದು 2020 ರಲ್ಲಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ; ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಸಂಭ್ರಮಾಚರಣೆ: ಆತಂಕಗೊಂಡು ಊರು ತೊರೆದ ಮುಸ್ಲಿಮರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ, ಎಲ್ಲಾ ಅಧಿಕಾರಗಳನ್ನು ಅನುಬವಿಸಿ, ಈಗ ಕಾಂಗ್ರೆಸ್ ಕಷ್ಟ ಕಾಲದಲ್ಲಿ ಇರುವಾಗ, ಪಕ್ಷ ತೊರೆಯುವುದು ಯಾವ ನ್ಯಾಯ?

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...