Homeಕರ್ನಾಟಕNDA ಜೊತೆ JDS ಮೈತ್ರಿ: ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಶೈಫುಲ್ಲಾ ರಾಜೀನಾಮೆ

NDA ಜೊತೆ JDS ಮೈತ್ರಿ: ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಶೈಫುಲ್ಲಾ ರಾಜೀನಾಮೆ

- Advertisement -
- Advertisement -

ಜೆಡಿಎಸ್‌–ಎನ್‌ಡಿಎ ಜೊತೆ ಮೈತ್ರಿ ಘೋಷಣೆ ಬೆನ್ನಲ್ಲೇ ಜೆಡಿಎಸ್ ಒಳಗಡೆ ರಾಜೀನಾಮೆ ಪರ್ವ ಆರಂಭವಾಗಿತ್ತು. ಇದೀಗ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಸದಸ್ಯತ್ವಕ್ಕೆ ಸೈಯದ್ ಶೈಫುಲ್ಲಾ ಅವರು ರಾಜೀನಾಮೆ ನೀಡಿದ್ದಾರೆ.

ಮುಂಬರುವ 2024ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ  ಶೈಫುಲ್ಲಾ, ಜಾತಿ-ಸಮುದಾಯಗಳ ನಡುವೆ ಬಿರುಕು ಮೂಡಿಸುವ ಪಕ್ಷದ ಜೊತೆ ಜೆಡಿಎಸ್ ಸೇರಿದೆ. ಕಳೆದ 30 ವರ್ಷಗಳಿಂದ ಪಕ್ಷದೊಂದಿಗೆ ಇದ್ದೆ, ನಮ್ಮ ಪಕ್ಷ ಜಾತ್ಯತೀತ ನೆಲೆಗಟ್ಟಿನ ಮೇಲೆ ನಿಂತಿದೆ ಮತ್ತು ನಾವು ಯಾವಾಗಲೂ ಆ ತತ್ವಗಳನ್ನು ಪ್ರಚಾರ ಮಾಡಿದ್ದೇವೆ. ಈಗ ನಮ್ಮ ಪಕ್ಷವು ಸಮುದಾಯಗಳು ಮತ್ತು ಜಾತಿಗಳ ನಡುವೆ ಬಿರುಕು ಮೂಡಿಸುವ ಪಕ್ಷದೊಂದಿಗೆ ಕೈಜೋಡಿಸುತ್ತಿದ್ದರೆ ನಾವು ಜಾತ್ಯತೀತ ನಾಯಕರು ಅದನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಶೈಫುಲ್ಲಾ, ಇದು ನಮ್ಮ ದೇಶ ಪ್ರಗತಿಯ ಹಾದಿ ಅಲ್ಲ, ಜನರ ನಡುವೆ ಬಿರುಕು ಮೂಡಿಸುವ ಬಿಜೆಪಿಯನ್ನು ಜಾತ್ಯತೀತ ಶಕ್ತಿಗಳು ಒಪ್ಪುವುದಿಲ್ಲ. ನಮಗೆ ಬಿಜೆಪಿ ಜೊತೆಗಿನ ಹೊಂದಾಣಿಕೆ ಕಷ್ಟ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...