Homeಮುಖಪುಟಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

ಹಿರಿಯ ವಿದ್ವಾಂಸ, ಖ್ಯಾತ ಇತಿಹಾಸಕಾರ ಪ್ರೊ. ಷ. ಶೆಟ್ಟರ್‌ ಇನ್ನಿಲ್ಲ

- Advertisement -
- Advertisement -

ಕನ್ನಡ ಸಾಂಸ್ಕೃತಿಕ ಕ್ಷೇತ್ರದ ಹಿರಿಯ ವಿದ್ವಾಂಸ, ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಪ್ರೊ. ಷಡಕ್ಷರಪ್ಪ ಶೆಟ್ಟರ್ (1935-2020) ರವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಒಂದು ವಾರದಿಂದಲೂ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕ ಬಡವಾಯಿತು, ತುಂಬಲಾರದ ನಷ್ಟ ಎಂದು ಬಹಳಷ್ಟು ಜನ ಸಂತಾಪ ಸೂಚಿಸಿದ್ದಾರೆ.

ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ಶಾಸನ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಸಾಹಿತ್ಯದ ಕುರಿತು ಪ್ರೊ.ಶೆಟ್ಟರ್ ಅವರು ಬರೆದ ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳು ಬಹಳಷ್ಟು ಜನರನ್ನು ಪ್ರಭಾವಿಸಿದೆ. ಇಂದಿಗೂ ಸಾವಿರಾರು ಜನರು ಅವರನ್ನು ತಮ್ಮ ಮಾರ್ಗದರ್ಶಕರು, ಗುರುಗಳು ಎಂದೇ ಪರಿಗಣಿಸುತ್ತಿದ್ದಾರೆ.

ಸ್ವಲ್ಪ ತಡವಾಗಿ ಕನ್ನಡದಲ್ಲಿ ಬರೆಯಲು ಆರಂಭಿಸಿದ ಅವರು ತಮ್ಮ ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ, ಹಳಗನ್ನಡ- ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ , ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಮೊದಲಾದ ಕೃತಿಗಳ ಮೂಲಕ ಕಳೆಗುಂದುತ್ತಿದ್ದ ಕನ್ನಡ ಸಂಶೋಧನೆಗೆ ನವ ಚೈತನ್ಯ ನೀಡಿದರು. ಕಳೆದ ನಾಲ್ಕಾರು ವರ್ಷಗಳಿಂದ ಅವರು ತೊಡಗಿಸಿಕೊಂಡಿದ್ದ ಶಾಸನಾಧರಿತ ಯೋಜನೆಗಳನ್ನು ಈಗ ಯಾರು ಮುಗಿಸಿಕೊಡುವರೋ ತಿಳಿದಿಲ್ಲ ಎಂದು ದೆಹಲಿಯ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಪುರುಷೋತ್ತಮ ಬಿಳಿಮನೆಯವರು ಸಂತಾಪ ಸೂಚಿಸಿದ್ದಾರೆ.

ಷ.ಶೆಟ್ಟರ್ ಅಗಲಿಕೆ ತೋರಿಕೆಗಲ್ಲದೆ ನಿಜಾರ್ಥದಲ್ಲಿ ತುಂಬಲಾರದ ನಷ್ಟ. ಶಾಸನಾಧ್ಯಯನ ಜನಸಾಮಾನ್ಯರಿಗಲ್ಲ ಎನ್ನುವ ವಾತಾವರಣ ಇರುವಾಗ ಶಾಸನಗಳಲ್ಲಿಯೇ ಜನಸಾಮಾನ್ಯರ ಬದುಕನ್ನು ಹುಡುಕಲೆತ್ನಿಸಿದ ದೈತ್ಯ ಪ್ರತಿಭೆ. ಅವರ ಕೃತಿಗಳನ್ನು ಓದುತ್ತಿದ್ದರೆ ಅವರ ಕಠಿಣ ಶ್ರಮ ಪಾಂಡಿತ್ಯ ಆಳದ ಹುಡುಕಾಟದ ಹಂಬಲಗಳು ಉಸಿರಿನಂತೆ ತಾಕುತ್ತವೆ ಎಂದು ಅರುಣ್‌ ಜೋಳದ ಕೂಡ್ಲಿಗಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಸ್ನಾತಕೋತ್ತರ ಹಂತದಲ್ಲಿ ನನಗೆ ಇತಿಹಾಸ ಬೋಧಿಸಿದ ಗುರುಗಳು, 1986 ರಿಂದ 1995 ರವರೆಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದಲ್ಲಿ ಹಿರಿಯ ಸಹೋದ್ಯೋಗಿಯಾಗಿ ನನಗೆ ಮಾರ್ಗದರ್ಶನ ಮಾಡಿದ ಹಿತೈಷಿಗಳು, ಬಹುಶ್ರುತ ವಿದ್ವಾಂಸರು ಮತ್ತು ಖ್ಯಾತ ಇತಿಹಾಸಕಾರರಾದ ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಇನ್ನಿಲ್ಲ. ಅವರ ಅಗಲಿಕೆಯ ಶೂನ್ಯವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ ಸಾಧ್ಯವಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಅಶೋಕ್‌ ಶೆಟ್ಟರ್‌ರವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇವರಿಗೆ ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...