Homeರಾಜಕೀಯಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಮಂಡಲ ಆಯೋಗ ಹೋರಾಟದ ‘ಮಸೀಹಾ’ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ಬಣ್ಣಿಸಿದ್ದಾರೆ

- Advertisement -
- Advertisement -

ಹಿರಿಯ ಸಮಾಜವಾದಿ, ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಏಳು ಬಾರಿ ಲೋಕಸಭೆಗೆ ಚುನಾಯಿತರಾಗಿರುವ ಅವರು, ಜಯಪ್ರಕಾಶ್ ನಾರಾಯಣ್‌ ಅವರಿಂದ ಹಿಡಿದು ಲಾಲು ಪ್ರಸಾದ್‌ ಯಾದವ್‌ವರೆಗಿನ ರಾಜಕೀಯ ದಿಗ್ಗಜರ ಜೊತೆಗೆ ಅವರು ರಾಜಕೀಯದಲ್ಲಿ ಸಕ್ರೀಯವಾಗಿದ್ದರು.

ಇಂಜಿನಿಯರ್ ಪದವೀಧರರಾಗಿದ್ದ ಶರದ್‌ ಯಾದವ್ ಅವರು ರಾಮ್ ಮನೋಹರ್ ಲೋಹಿಯಾ ಅವರ ಸಮಾಜವಾದಕ್ಕೆ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗಳ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಅವರು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಜಯಪ್ರಕಾಶ್ ನಾರಾಯಣ್‌ ಅವರೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶರದ್‌ ಯಾದವ್‌ ಅವರು ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ ಮೂರು ಪದಗಳ ಪೋಸ್ಟ್‌ನೊಂದಿಗೆ ತಮ್ಮ ತಂದೆಯ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಪಾಪಾ ನಹಿ ರಹೆನ್ (ಅಪ್ಪ ಇನ್ನಿಲ್ಲ)” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಶರದ್‌ ಯಾದವ್ ಅವರು ಪ್ರಬಲ ವಾಗ್ಮಿಯಾಗಿ ತಮ್ಮ ಛಾಪು ಮೂಡಿಸಿದ್ದ ಅವರು ಉತ್ತರ ಪ್ರದೇಶದಲ್ಲಿ ಕೂಡಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಂತಿಮವಾಗಿ ಬಿಹಾರವನ್ನಷ್ಟೆ ತಮ್ಮ ರಾಜಕೀಯ ಕ್ಷೇತ್ರವಾಗಿ ಮಾಡಿಕೊಂಡ ಅವರು ವಿ.ಪಿ. ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟ ಸಚಿವರಾಗಿದ್ದರು.

1980 ಮತ್ತು 90 ರ ದಶಕದಲ್ಲಿ ರಾಜಕೀಯವನ್ನು ರೂಪಿಸುವಲ್ಲಿ ಶರದ್‌ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. 1989 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು 1980 ರ ದಶಕದಲ್ಲಿ ಜನತಾ ದಳದ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರಲು ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಮೇಲೆ ಒತ್ತಡ ಹೇರಿದ ಪ್ರಮುಖ ನಾಯಕರಲ್ಲಿ ಶರದ್‌ ಯಾದವ್‌ ಕೂಡಾ ಒಬ್ಬರಾಗಿದ್ದಾರೆ. ಆದರೆ ಮಹಿಳೆಯರಿಗೆ 33% ಮೀಸಲಾತಿಯನ್ನು ಪರಿಚಯಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವರು ಹಿಂದುಳಿದ ವರ್ಗಗಳ ಪ್ರತಿರೋಧವನ್ನು ಸಂಘಟಿಸಿದ್ದರು. ಈ ಬೇಡಿಕೆಯನ್ನು ಅವರು ಮೇಲ್ಜಾತಿ ಗಣ್ಯರ ಪಿತೂರಿ ಎಂದು ಬಣ್ಣಿಸಿದ್ದರು.

2017 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ನೇತೃತ್ವದ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಶರದ್ ಯಾದವ್ ಅವರನ್ನು ಅನುಸರಿಸಲು ನಿರಾಕರಿಸಿದರು. ಇದಕ್ಕಾಗಿ ಜೆಡಿಯು ಅವರನ್ನು ರಾಜ್ಯಸಭೆಯಿಂದ ಹೊರಹಾಕಲು ಪ್ರಯತ್ನಿಸಿತು. ನಂತರ, ಅವರು ನಿತೀಶ್ ಕುಮಾರ್ ಅವರೊಂದಿಗೆ ಬೇರ್ಪಟ್ಟು 2018 ರಲ್ಲಿ ತಮ್ಮದೇ ಆದ ಪಕ್ಷವಾದ ಲೋಕತಾಂತ್ರಿಕ ಜನತಾ ದಳ (LJD) ಅನ್ನು ಸ್ಥಾಪಿಸಿದರು. ಈ ಪಕ್ಷವನ್ನು ಐದು ವರ್ಷಗಳ ನಂತರ, 2022 ರಲ್ಲಿ ರಾಷ್ಟ್ರೀಯ ಜನತಾ ದಳ (RJD) ನೊಂದಿಗೆ ವಿಲೀನಗೊಳಿಸಿದರು. ಅವರ ಪುತ್ರಿ ಸುಭಾಷಿಣಿಗೆ ಆರ್‌ಜೆಡಿಯ ರಾಷ್ಟ್ರೀಯ ಮಂಡಳಿಯಲ್ಲಿ ಸ್ಥಾನವನ್ನೂ ನೀಡಲಾಗಿತ್ತು.

ಶರದ್‌ ಯಾದವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

“ಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸುದೀರ್ಘ ವರ್ಷಗಳಲ್ಲಿ ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು. ನಾನು ನಮ್ಮ ನಡುವಿನ ಸಂವಾದಗಳನ್ನು ಯಾವಾಗಲೂ ಗೌರವಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಹೇಳಿದ್ದಾರೆ.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ‘ಮಂಡಲ ಮಸೀಹಾ’ ಎಂದು ಬಣ್ಣಿಸಿದ್ದಾರೆ.

“ಮಹಾನ್ ಸಮಾಜವಾದಿ ನಾಯಕ, ನನ್ನ ಆಪ್ತರ ನಿಧನದ ಬಗ್ಗೆ ತಿಳಿದು ನಾನು ತೀವ್ರ ದುಃಖದಲ್ಲಿದ್ದೇನೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ನಾನು ಮಾತಾ ಜೀ ಮತ್ತು ಸಹೋದರ ಶಾಂತನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ದುಃಖದ ಸಮಯದಲ್ಲಿ, ಇಡೀ ಸಮಾಜವಾದಿ ಕುಟುಂಬ ಅವರೊಂದಿಗಿದೆ” ಎಂದು ಹೇಳಿದ್ದಾರೆ.

https://twitter.com/TejashwiOffice/status/1613612650642169856.

ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿ, “ನನ್ನ ಬಹುಕಾಲದ ಗೆಳೆಯ ಮತ್ತು ಜನತಾ ಪರಿವಾರದ ಸಹೋದ್ಯೋಗಿ ಶ್ರೀ ಶರದ್ ಯಾದವ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಆರೋಗ್ಯ ವಿಚಾರಿಸಲು ಕೆಲ ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅವನ್ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...