Homeಮುಖಪುಟಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

- Advertisement -
- Advertisement -

ಖ್ಯಾತ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಫಾಲಿ ನಾರಿಮನ್ ಇಂದು ನಿಧನರಾಗಿದ್ದಾರೆ.

95 ವರ್ಷದ ಫಾಲಿ ನಾರಿಮನ್ ಇಂದು ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಫಾಲಿ ನಾರಿಮನ್ ಜನವರಿ 10, 1929ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದ್ದರು. ಫಾಲಿ ನಾರಿಮನ್ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಮೊದಲು ವಕೀಲರಾಗಿ ಅಭ್ಯಾಸವನ್ನು ಪ್ರಾರಂಭಿಸಿದ್ದರು. ನಂತರ ದೆಹಲಿಗೆ ತೆರಳಿದ್ದರು. ಅವರು 1972ರಲ್ಲಿ ಭಾರತದ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು. ಫಾಲಿ ನಾರಿಮನ್ 1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯನ್ನು ಘೋಷಿಸುವ ನಿರ್ಧಾರವನ್ನು ವಿರೋಧಿಸಿ ರಾಜೀನಾಮೆ ನೀಡಿದ್ದರು.

ಖ್ಯಾತ ನ್ಯಾಯಶಾಸ್ತ್ರಜ್ಞ  ಫಾಲಿ ನಾರಿಮನ್ ಅವರಿಗೆ 1991ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು, ಈಗ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ.

ಫಾಲಿ ನಾರಿಮನ್ ಅವರು 1991ರಿಂದ 2010ರವರೆಗೆ ಭಾರತದ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು.

ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ಫಾಲಿ ನಾರಿಮನ್ ಅವರ ನಿಧನದ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿಯನ್ನು ನೀಡಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದು, ಇದು ಯುಗವೊಂದರ ಅಂತ್ಯ. ಫಾಲಿನಾರಿಮನ್ ನಿಧನರಾದರು, ಅವರು ಕಾನೂನು ಮತ್ತು ಸಾರ್ವಜನಿಕ ಜೀವನದಲ್ಲಿ ಶಾಶ್ವತವಾಗಿ ಹೃದಯ ಮತ್ತು ಮನಸ್ಸಿನಲ್ಲಿ ಉಳಿಯುವ ಜೀವಂತ ದಂತಕಥೆ. ಅವರ ಅಮೋಘ ಸಾಧನೆಯನ್ನು ಮಾಡಿದ್ದಾರೆ. ಅವರು  ತಮ್ಮ ತತ್ವಗಳ ಜೊತೆ ಅಚಲವಾಗಿ ನಿಂತುಕೊಂಡವರು. ಅವರ ನಿಷ್ಠುರವಾಗಿದ್ದ ಗುಣವನ್ನು ಅವರ ಮೇಧಾವಿ ಮಗ ಹೊಂದಿದ್ದಾರೆ ಎಂದು ಫಾಲಿ ನಾರಿಮನ್ ಅವರನ್ನು ಸ್ಮರಿಸುವಾಗ ಅವರ ಮಗ ರೊಹಿಂಗ್ಟನ್ ನಾರಿಮನ್ ಅವರನ್ನು ಸಿಂಘ್ವಿ ಶ್ಲಾಘಿಸಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...