Homeಕರ್ನಾಟಕಹಿರಿಯ ರಂಗಭೂಮಿ ಕಲಾವಿದ, ಸಂಗೀತ ಸಂಯೋಜಕ ಆರ್‌. ಪರಮಶಿವನ್ ನಿಧನ

ಹಿರಿಯ ರಂಗಭೂಮಿ ಕಲಾವಿದ, ಸಂಗೀತ ಸಂಯೋಜಕ ಆರ್‌. ಪರಮಶಿವನ್ ನಿಧನ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಗೀತ ಸಂಯೋಜಕ ಆರ್‌. ಪರಮಶಿವನ್ ಅವರು, ಬೆಂಗಳೂರಿನ ರಾಜಾಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಹೃದಯಾಘಾದಿಂದ ಮೃತಪಟ್ಟರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ಕೊರೊನಾ ಕಾರಣಕ್ಕೆ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪುತ್ರ ದೀಪಕ್ ಪರಮಶಿವನ್ ಕೆನಡಾದಲ್ಲಿ ಹಾಗೂ ಪುತ್ರಿ ಸ್ಮಿತಾ ಸ್ಯಾನ್‌ಪ್ರಾನ್ಸಿಸ್ಕೋದಲ್ಲಿ ನೆಲೆಸಿದ್ದಾರೆ. ಶುಕ್ರವಾರ ರಾತ್ರಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನೆರವೇರುತ್ತದೆ ಎಂದು ಕುಟುಂಬ ವರ್ಗ ತಿಳಿಸಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!


ಹಾರ್ಮೋನಿಯಂ ನುಡಿಸುತ್ತಿರುವ ಆರ್. ಪರಮಾಶಿವನ್ ಅವರ ವಿಡಿಯೋ

ಮೈಸೂರಿನಲ್ಲಿ ಜನಿಸಿದ್ದ ಪರಮಾಶಿವನ್ ಅವರ ಸಂಗೀತ ಅಭ್ಯಾಸವು ಬಹಳ ಚಿಕ್ಕ ವಯಸ್ಸಿನಲ್ಲೇ ಪ್ರಾರಂಭವಾಯಿತು. ಅವರು ಹಿರಣ್ಣಯ್ಯ ಮಿತ್ರ ಮಂಡಳಿ, ಶೇಷಕಲಾ ಮಂಡಳಿ, ಸುಬ್ಬಯ್ಯ ನಾಯ್ಡು ಕಂಪನಿ ಹಾಗೂ ಗುಬ್ಬಿ ವೀರಣ್ಣ ಕಂಪನಿಯಲ್ಲಿ ಸೇವೆ ಸಲ್ಲಿಸಿದ್ದರು. 1970 ರಿಂದ ಇಪ್ಪತ್ತು ನೃತ್ಯ-ನಾಟಕಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

1990 ರಲ್ಲಿ ಕರ್ನಾಟಕ ಅಕಾಡೆಮಿಯಿಂದ ಕಲಾಶ್ರೀ ಪ್ರಶಸ್ತಿ, 2005 ರಲ್ಲಿ ಕರ್ನಾಟಕ ಸರ್ಕಾರದ ಸುವರ್ಣ ಕರ್ನಾಟಕ ರಾಜೋತ್ಸವ ಪ್ರಶಸ್ತಿ, ರಾಜ್ಯ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿದೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...