Homeಮುಖಪುಟಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣ ಖಾಸಗಿ ಕಾರ್ಯಕ್ರಮಕ್ಕೆ ಬಳಕೆ

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಪುತ್ರನ ಮಗನ ವಿವಾಹ ಪೂರ್ವ ಕಾರ್ಯಕ್ರಮಗಳ ಹಿನ್ನೆಲೆ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಿದೆ ಎಂದು ವರದಿಯಾಗಿದೆ.

ದಿ ವೈರ್ ವರದಿಯ ಪ್ರಕಾರ, ಪಾಕಿಸ್ತಾನದ ಗಡಿಯ ಸಮೀಪದಲ್ಲಿರುವ ಜಾಮ್‌ನಗರ ಪಟ್ಟಣದ ಭಾರತೀಯ ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ. ಇದರಿಂದ ಅಂಬಾನಿ ಮಗನ ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ಆಗಮಿಸುವವರು ಈ ವಿಮಾನ ನಿಲ್ದಾಣಕ್ಕೆ ಬಂದಿಳಿಯಬಹುದು.

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಗುಜರಾತಿ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ನಡೆಯಲಿದೆ. ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ದೇಶ, ವಿದೇಶಗಳಿಂದ ಅತಿಥಿಗಳು ಆಗಮಿಸುತ್ತಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಫೆಬ್ರವರಿ 28 ರಿಂದ ಮಾರ್ಚ್ 4ರ ನಡುವೆ, ಜಾಮ್‌ನಗರ ವಿಮಾನ ನಿಲ್ದಾಣವು ಕನಿಷ್ಠ 150 ವಿಮಾನಗಳನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಇವುಗಳಲ್ಲಿ 50 ವಿದೇಶಿ ಸ್ಥಳಗಳಿಂದ ನೇರವಾಗಿ ವಿಮಾನಗಳು ಆಗಮಿಸಲಿದೆ. ಐದು ದಿನಗಳಲ್ಲಿ ವಿಮಾನ ನಿಲ್ದಾಣದ ಮೂಲಕ 300ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುವ ಸಾಧ್ಯತೆಯಿದೆ ಎಂದು ಜಾಮ್‌ನಗರದ ವಿಮಾನ ನಿಲ್ದಾಣದ ನಿರ್ದೇಶಕ ಡಿ.ಕೆ. ಸಿಂಗ್ ತಿಳಿಸಿರುವುದಾಗಿ ದಿ ಹಿಂದೂ ಬಿಸಿನೆಸ್‌ಲೈನ್‌ ವರದಿ ಮಾಡಿದೆ.

ಅನಂತ್ ಅಂಬಾನಿಯ ವಿವಾಹ ಕಾರ್ಯಕ್ರಮದಲ್ಲಿ ಮುಂಬೈ, ದೆಹಲಿ ಸೇರಿದಂತೆ ದೇಶ ವಿದೇಶಗಳಿಂದ ಸುಮಾರು 2 ಸಾವಿರ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ. ಇವರೆಲ್ಲೂ ಜಾಮ್‌ನಗರ ವಿಮಾನ ನಿಲ್ದಾಣವನ್ನೇ ಆಶ್ರಯಿಸಲಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಮೇಲಿನ ಒತ್ತಡ ಹಲವು ಪಟ್ಟು ಹೆಚ್ಚಾಗಿಲಿದೆ. ಪ್ರಸ್ತುತ ವಿಮಾನ ನಿಲ್ಧಾಣ ಸರಾಸರಿ ಮೂರು ನಿಗದಿತ ಮತ್ತು ಐದು ನಿಗದಿತವಲ್ಲದ ವಿಮಾನಗಳ ಪ್ರತಿದಿನ ಸ್ವೀಕರಿಸುತ್ತಿದೆ ಎಂದು ವರದಿ ತಿಳಿಸಿದೆ.

“ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ, ಹಣಕಾಸು ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯವು ವಿಮಾನ ನಿಲ್ದಾಣದಲ್ಲಿ ಕಸ್ಟಮ್, ಇಮಿಗ್ರೇಷನ್ ಮತ್ತು ಕ್ವಾರಂಟೈನ್ (CIQ)ಸೌಲಭ್ಯವನ್ನು ಸ್ಥಾಪಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ” ಎಂದು ದಿ ಹಿಂದೂ ವರದಿ ಮಾಡಿದೆ.

ಅಂಬಾನಿ ಮಗನ ಮದುವೆ ಹಿನ್ನೆಲೆ ಭಾರತೀಯ ವಾಯುಪಡೆ ತನ್ನ ಸೂಕ್ಷ್ಮ ತಾಂತ್ರಿಕ ಪ್ರದೇಶಕ್ಕೆ ಖಾಸಗಿ ವಿಮಾನಗಳನ್ನು ಅನುಮತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಅತಿಥಿಗಳನ್ನು ಸ್ವೀಕರಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗಾತ್ರವನ್ನು ವಿಸ್ತರಿಸಿದೆ. ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ಇರುವ ಪ್ರಯಾಣಿಕ ಕಟ್ಟಡ 475 ಚದರ ಕಿ.ಮೀ ನಿಂದ 900 ಚದರ ಮೀಟರ್‌ ವರೆಗೆ ಗಾತ್ರವನ್ನು ಹೊಂದಿದೆ. ಇದು ಕನಿಷ್ಠ 180 ಮತ್ತು ಗರಿಷ್ಠ ಸುಮಾರು 360 ಪ್ರಯಾಣಿಕರನ್ನು ಸ್ವೀಕರಿಸುವ ಸಾಮಾರ್ಥ್ಯ ಹೊಂದಿದ.

ವಿಮಾನ ನಿಲ್ಧಾನ ವಿಸ್ತರಣೆ ಕಾರ್ಯವನ್ನು ಬಹಳ ಹಿಂದೆಯೇ ಪ್ರಾರಂಭಿಸಲಾಗಿತ್ತು. ಆದರೆ, ಅಂಬಾನಿ ಮಗನ ಮದುವೆ ಹಿನ್ನೆಲೆ ಕಾಮಗಾರಿ ತ್ವರಿತಗೊಳಿಸಲಾಯಿತು ಎಂದು ಗೌಪ್ಯ ಮೂಲವನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

“ಈಗಿರುವ 16 ಮಂದಿಯೊಂದಿಗೆ ಮೂವತ್ತೈದು ಗೃಹರಕ್ಷಕ ಸಿಬ್ಬಂದಿಯನ್ನು ವಿಮಾನ ನಿಲ್ಧಾನದಲ್ಲಿ ನಿಯೋಜಿಸಲಾಗಿದೆ. ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು 35 ರಿಂದ 70ಕ್ಕೆ ದ್ವಿಗುಣಗೊಳಿಸಿದೆ. ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು ತಮ್ಮ ಸಿಬ್ಬಂದಿಯ ಸಂಖ್ಯೆಯನ್ನು 65ರಿಂದ 125ಕ್ಕೆ ಹೆಚ್ಚಿಸಿದ್ದಾರೆ” ಎಂದು ದಿ ಹಿಂದೂ ಒತ್ತಿ ಹೇಳಿದೆ.

ವಿವಾಹಪೂರ್ವ ಕಾರ್ಯಕ್ರಮಕ್ಕೆ ಬರುವ ಗಣ್ಯರನ್ನು ಬರಮಾಡಿಕೊಳ್ಳಲು ರಕ್ಷಣಾ ವಿಮಾನ ನಿಲ್ದಾಣದ ಬಳಿ ವಿಶೇಷ ವ್ಯವಸ್ಥೆ ಮಾಡಲು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್‌ಗೆ ಅನುಮತಿ ನೀಡಲಾಗಿದೆ ಎಂದು ದಿ ಹಿಂದೂ ಬಿಸಿನೆಸ್‌ಲೈನ್ ವರದಿ ತಿಳಿಸಿದೆ.

ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಶ್ರೀಮಂತ ಭಾರತೀಯರಿಗೆ ‘ಭಾರತದಲ್ಲಿ ವಿವಾಹವಾಗಲು’ ಮನವಿ ಮಾಡಿದ್ದರು. ಅವರ ಸರ್ಕಾರವು ಅಂಬಾನಿ ಪುತ್ರನ ಮದುವೆಗಾಗಿ ಜಾಮ್‌ನಗರ ರಕ್ಷಣಾ ವಿಮಾನ ನಿಲ್ದಾಣದಲ್ಲಿ ನಡೆಸುತ್ತಿದ್ದ ವಿಶೇಷ ಸಿದ್ಧತೆಗಳನ್ನು ಉದ್ದೇಶಿಸಿ ಈ ಮನವಿ ಮಾಡಲಾಗಿತ್ತಾ ಎಂದು ಮಾಧ್ಯಮಗಳು ಪ್ರಶ್ನೆ ಎತ್ತಿವೆ.

ಡಿಸೆಂಬರ್ 29 ರಂದು ರಾಜಸ್ಥಾನದ ದೇವಸ್ಥಾನದಲ್ಲಿ ಅಂಬಾನಿ ಪುತ್ರನ ನಿಶ್ಚಿತಾರ್ಥ ನಡೆದೆ. ಜುಲೈ 12, 2024ರಂದು ವಿವಾಹ ನಡೆಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...