Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...