Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎನ್ನುತ್ತಿವೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳಲ್ಲಿ ಈ ಮೈತ್ರಿ ಕಾಣೆಯಾಗಿದೆ.

ಹೌದು, ಬಿಜೆಪಿಯ ಭಿತ್ತಿ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಏಕವ್ಯಕ್ತಿ ಚಿತ್ರ ಮಾತ್ರ ಕಾಣಿಸಿಕೊಂಡಿದೆ. ಈ ಕಡೆ ಪತ್ರಿಕೆಗಳಲ್ಲಿ, ಕರಪತ್ರಗಳಲ್ಲಿ ಜೆಡಿಯು ನೀಡಿರುವ ನಿತೀಶ್ ಕುಮಾರ್ ಅವರ ಜಾಹೀರಾತುಗಳಲ್ಲಿ ಪಿಎಂ ಮೋದಿ ಅಥವಾ ಬಿಜೆಪಿ ಬಗ್ಗೆ ಉಲ್ಲೇಖವಿಲ್ಲ. ಇಂತಹ ಬೆಳವಣಿಗೆಗಳು ಪ್ರತಿಪಕ್ಷಗಳಿಗೆ ಲೇವಡಿ ಮಾಡಲು ಆಹಾರ ಒದಗಿಸಿದೆ.

ಶನಿವಾರ ಬಿಹಾರದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಎಲ್ಲಿಯೂ  ಜಾಹೀರಾತಿನಲ್ಲಿ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಶ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಜಾಹೀರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅನೇಕ ಮಂದಿ ವ್ಯಂಗ್ಯವಾಡಿದ್ದಾರೆ.

 

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

0p55fkrg

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಕಾರ್ಯಕ್ರಮದ ದಿನದಂದು ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, 2010 ರಲ್ಲಿ, ಪಾಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ಜಾಹೀರಾತಿನಲ್ಲಿ ನಿತೀಶ್‌ ಕುಮಾರ್ ಮತ್ತು ಮೋದಿ ಜತೆಗಿರುವ ಚಿತ್ರವೊಂದು ಪ್ರಕಟವಾಗಿತ್ತು. ಅಂದು ಕೋಪಗೊಂಡಿದ್ದ ನಿತೀಶ್ ಕುಮಾರ್‌ ಎಫ್‌ಐಆರ್ ಸಹ ದಾಖಲಿಸಿದ್ದರು.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆಯ ಬ್ಯಾನರ್‌ಗಳು ಬಿಹಾರದಲ್ಲಿ ಪ್ರಕಟವಾಗಿದ್ದವು.  2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್‌ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...