Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...