Homeಮುಖಪುಟಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ: ದೆಹಲಿ ಸರ್ಕಾರದ ನಿರ್ಧಾರ

ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ: ದೆಹಲಿ ಸರ್ಕಾರದ ನಿರ್ಧಾರ

ಕಚೇರಿಗಳಲ್ಲಿ ತಕ್ಷಣ ಅಂತಹ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗದಿದ್ದಲ್ಲಿ, ವಿಕಲಚೇತನರಿಗೆ  ಲಭ್ಯವಿರುವ ಸೌಲಭ್ಯವನ್ನು ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳ ಬಳಕೆಗಾಗಿ ಗೊತ್ತುಪಡಿಸಬೇಕು

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತರಿಗೆ ಸಮರ್ಪಕ ಕಲ್ಯಾಣ ಕ್ರಮಗಳನ್ನು ಖಾತರಿಪಡಿಸುವ ಉದ್ದೇಶದಿಂದ ದೆಹಲಿ-ಎನ್‌ಸಿಆರ್‌ನಲ್ಲಿರುವ ಎಲ್ಲಾ ಕಚೇರಿಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯಗಳನ್ನು ನಿರ್ಮಿಸಲು, ಎಲ್ಲಾ ಇಲಾಖೆಗಳು, ಜಿಲ್ಲಾ ಅಧಿಕಾರಿಗಳು, ಪುರಸಭೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ಕಚೇರಿಗಳಲ್ಲಿ ತಕ್ಷಣ ಅಂತಹ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗದಿದ್ದಲ್ಲಿ, ವಿಕಲಚೇತನರಿಗೆ ಲಭ್ಯವಿರುವ ಸೌಲಭ್ಯವನ್ನು ಸದ್ಯಕ್ಕೆ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳ ಬಳಕೆಗಾಗಿ ಗೊತ್ತುಪಡಿಸಬೇಕು ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

“ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ಕಾಯ್ದೆ 2019 ರ ಸೆಕ್ಷನ್ 22 ರ ನಿಬಂಧನೆಗಳಿಗೆ ಅನುಸಾರವಾಗಿ ಸಮರ್ಪಕ ಕಲ್ಯಾಣ ಕ್ರಮಗಳನ್ನು ಖಾತ್ರಿಪಡಿಸಿಕೊಳ್ಳಲು, ಎನ್‌ಸಿಟಿ ದೆಹಲಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ಎಲ್ಲಾ ಸಾರ್ವಜನಿಕ ಕಟ್ಟಡಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ಗುರುತಿಸಲಾದ ಸಾರ್ವಜನಿಕ ಶೌಚಾಲಯ ಸೌಲಭ್ಯಗಳನ್ನು ರಚಿಸಲು ನಿರ್ದೇಶಿಸಲಾಗಿದೆ ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

2021-22ರ ವಾರ್ಷಿಕ ಬಜೆಟ್‌ನಲ್ಲಿ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ರಾಷ್ಟ್ರ ರಾಜಧಾನಿಯಲ್ಲಿ ತೃತಿಯ ಲಿಂಗಕ್ಕೆ ಪ್ರತ್ಯೇಕವಾಗಿ ಸಾರ್ವಜನಿಕ ಶೌಚಾಲಯಗಳನ್ನು ಒದಗಿಸಲು ನಿರ್ಧರಿಸಿದೆ. ಎರಡು ವರ್ಷಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೌಚಾಲಯ ನಿರ್ಮಿಸಲು ಗಡುವು ನಿಗದಿಪಡಿಸಲಾಗಿದೆ.

“ಅಂತಹ ಪ್ರತ್ಯೇಕ ಶೌಚಾಲಯಗಳು ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ವಿಕಲಚೇತನರ ಮತ್ತು ಟಿ ಎರಡರ ಚಿಹ್ನೆಗಳನ್ನು ಪ್ರದರ್ಶಿಸುತ್ತವೆ. ಟ್ರಾನ್ಸ್ ಜನರಿಗೆ ತಮ್ಮ ಸ್ವಯಂ-ಗುರುತಿಸಲ್ಪಟ್ಟ ಲಿಂಗಕ್ಕೆ ಅನುಗುಣವಾಗಿ ಲಿಂಗಾಧಾರಿತ ಶೌಚಾಲಯಗಳನ್ನು ಬಳಸಲು ಅನುಮತಿಸಲಾಗುವುದು” ಎಂದು ಸಮಾಜ ಕಲ್ಯಾಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...