Homeಕರ್ನಾಟಕಸೆಪ್ಟೆಂಬರ್‌‌ 1 ರಿಂದ ಪದವಿ ಕಾಲೇಜು ಶೈಕ್ಷಣಿಕ ವರ್ಷ ಪ್ರಾರಂಭ: ಡಿಸಿಎಂ ಅಶ್ವಥ್ ನಾರಾಯಣ್

ಸೆಪ್ಟೆಂಬರ್‌‌ 1 ರಿಂದ ಪದವಿ ಕಾಲೇಜು ಶೈಕ್ಷಣಿಕ ವರ್ಷ ಪ್ರಾರಂಭ: ಡಿಸಿಎಂ ಅಶ್ವಥ್ ನಾರಾಯಣ್

ಸೆಪ್ಟೆಂಬರ್ 1 ರಿಂದ ಆನ್‌ಲೈನ್ ಮತ್ತು ಅಕ್ಟೋಬರ್‌‌ನಿಂದ ಆಫ್‌ಲೈನ್ ತರಗತಿಗಳು ಶುರುವಾಗಲಿವೆ

- Advertisement -
- Advertisement -

ಸೆಪ್ಟೆಂಬರ್ 1 ರಿಂದ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್‌ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್‌‌ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲವು ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದಿರುವ ಅವರು, ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದಿದ್ದಾರೆ.

ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.


ಓದಿ: ಮಣ್ಣಿನ ಗೌರಿಯಾದರೂ ಸರಿ,  ಮೌನಗೌರಿಯಾದರೂ ಸರಿ, ಆದರೆ ಮಾತನಾಡುವ ಗೌರಿಯಾದಿರೋ ಗುಂಡಿಟ್ಟು ಕೊಲ್ಲಲಾಗುತ್ತದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...