Homeಮುಖಪುಟಸೆಪ್ಟಂಬರ್ 27 ಭಾರತ್ ಬಂದ್‌: ಸಾಹಿತಿ, ಹೋರಾಟಗಾರರ ಬೆಂಬಲ

ಸೆಪ್ಟಂಬರ್ 27 ಭಾರತ್ ಬಂದ್‌: ಸಾಹಿತಿ, ಹೋರಾಟಗಾರರ ಬೆಂಬಲ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿರುವ ಭಾರತ ಬಂದ್‌ಗೆ ರಾಜ್ಯದ ಸಾಹಿತಿಗಳು, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದು ಹೇಳಿದ್ದಾರೆ.

‘ಕೃಷಿ ಕಾಯ್ದೆಗಳ ಜತೆಯೇ ಎಪಿಎಂಸಿ, ವಿದ್ಯುತ್, ಕಾರ್ಮಿಕ ಕಾಯ್ದೆಗಳು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಗಳೆಲ್ಲವೂ ಬಂಡವಾಳಶಾಹಿಗಳನ್ನು ಬಲಗೊಳಿಸಿ ಸಾಮಾನ್ಯ ಜನರನ್ನು ದುರ್ಬಲಗೊಳಿಸುವ ಮೋದಿ ಸರ್ಕಾರದ ನೀತಿಯ ಸ್ಪಷ್ಟ ಉದಾಹರಣೆಗಳು. ಇನ್ನೊಂದೆಡೆ, ದಿನದ ದುಡಿಮೆಯನ್ನೇ ನಂಬಿ ಬದುಕುವ ಶ್ರಮಿಕ ಜನರನ್ನು ಸಂಕಷ್ಟಕ್ಕೆ ತಳ್ಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಜನ ವಿರೋಧಿ ನಡೆ ಅನುಸರಿಸುತ್ತಿರುವುದರಿಂದಲೇ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದನ್ನು ಬೆಂಬಲಿಸುತ್ತಿರುವುದಾಗಿ ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.27 ಕ್ಕೆ ವಿವಾದಾತ್ಮಕ ಕೃಷಿ ಕಾಯ್ದೆಗಳು ಜಾರಿಯಾಗಿ ಒಂದು‌ ವರ್ಷ ಕಳೆಯಲಿದೆ. ಈ ಹಿನ್ನೆಲೆ ಹೋರಾಟ ನಿರತ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದೆ.

ಇನ್ನೊಂದೆಡೆ ಭಾರತ್ ಬಂದ್‌ಗೆ ಜಗನ್ ಮೋಹನ್ ರೆಡ್ಡಿಯವರ ಆಂಧ್ರಪ್ರದೇಶ ಸರ್ಕಾರ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರಿಗೆ ಮತ್ತು ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತದೆ ಎಂದು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...