Homeಅಂತರಾಷ್ಟ್ರೀಯಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

- Advertisement -
- Advertisement -

ಕೆನಡಾ ದೇಶದ ಬರ್ನಾಬಿ ನಗರವು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಗೌರವಾರ್ಥವಾಗಿ ಸೆಪ್ಟೆಂಬರ್ 5 ಅನ್ನು “ಗೌರಿ ಲಂಕೇಶ್‌ ಡೇ” ಎಂದು ಘೋಷಿಸಿದೆ. ಗೌರಿ ಲಂಕೇಶ್ ಹತ್ಯೆಯಾಗಿ ಈ ಸೆಪ್ಟೆಂಬರ್‌ಗೆ ನಾಲ್ಕು ವರ್ಷಗಳು ತುಂಬುತ್ತದೆ. ಅವರನ್ನು ಬಲಪಂಥೀಯ ಉಗ್ರರು 2017 ರ ಸೆಪ್ಟೆಂಬರ್‌ 5 ರಂದು ಬೆಂಗಳೂರಿನ ಅವರ ನಿವಾಸದ ಮುಂದೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಬರ್ನಾಬಿ ನಗರವು ಈ ನಿರ್ಧಾರವನ್ನು ಆಗಸ್ಟ್ 27 ರ ಶುಕ್ರವಾರದಂದು ಘೋಷಿಸಿದೆ. ನಗರದ ಮೇಯರ್‌ ಮೈಕ್ ಹರ್ಲಿ ಅವರು ಹೊರಡಿಸಿರುವ ಘೋಷಣಾ ಪತ್ರದಲ್ಲಿ, “ಧೈರ್ಯಶಾಲಿ ಭಾರತೀಯ ಪತ್ರಕರ್ತೆ ಗೌರಿ ಲಂಕೇಶ್‌ ಸತ್ಯ ಮತ್ತು ನ್ಯಾಯದ ಪರವಾಗಿ ನಿಂತರು…ದಮನದ ವಿರುದ್ಧ ಮತ್ತು ಮಾನವ ಹಕ್ಕುಗಳ ಹೋರಾಟದಲ್ಲಿ ಅವರು ತಮ್ಮ ಜೀವವನ್ನೆ ಅರ್ಪಿಸಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಗೌರಿ ಲಂಕೇಶ್‌ ಅವರಿಗೆ ಮರಣೋತ್ತರವಾಗಿ ನೀಡಲ್ಪಡುತ್ತಿರುವ ಅಂತಾರಾಷ್ಟ್ರೀಯ ಗೌರವ ಇದು ಮೊದಲನೆಯದ್ದಲ್ಲ. ಅಕ್ಟೋಬರ್ 8, 2018 ರಂದು ಫ್ರಾನ್ಸ್‌ನ ಬೈಯಕ್ಸ್-ಕ್ಯಾಲ್ವಾಡೋಸ್ ಪ್ರಶಸ್ತಿಯನ್ನು ಗೌರಿ ಲಂಕೇಶ್‌ಗೆ ನೀಡಿ ಗೌರವಿಸಲಾಗಿತ್ತು.

ಬೈಯಕ್ಸ್-ಕ್ಯಾಲ್ವಾಡೋಸ್ ಪ್ರಶಸ್ತಿಗಳು ಯುದ್ಧ ವರದಿಗಾರರಿಗೆ 1994 ರಿಂದಲೂ ನೀಡುವ ಪ್ರಶಸ್ತಿಯಾಗಿದೆ. ಇದನ್ನು ಬೈಯಕ್ಸ್ ನಗರ ಮತ್ತು ಜನರಲ್ ಕೌನ್ಸಿಲ್ ಆಫ್ ಕ್ಯಾಲ್ವಾಡೋಸ್‌ನಿಂದ ಪ್ರತಿ ವರ್ಷ ನೀಡಲಾಗುತ್ತದೆ.

ಕಳೆದ ವರ್ಷ ಬರ್ನಾಬಿ ನಗರವು ಜಸ್ವಂತ್ ಸಿಂಗ್ ಖಲ್ರಾ ಅವರನ್ನು ಗೌರವಿಸಲು ಒಂದು ದಿನವನ್ನು ಘೋಷಿಸಿತ್ತು. ಮಾನವ ಹಕ್ಕುಗಳ ಹೋರಾಟಗಾರರಾಗಿರುವ ಅವರನ್ನು ಪೊಲೀಸರು ಕೊಂದು ಹಾಕಿದ್ದರು. ಖಲ್ರಾ ಅವರನ್ನು ಸೆಪ್ಟೆಂಬರ್ 6, 1995 ರಂದು ಅಮೃತಸರದಲ್ಲಿರುವ ಅವರ ಮನೆಯಿಂದ ಅಪಹರಿಸಿ, ನಂತರ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...