Homeಮುಖಪುಟದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು  2002ರಲ್ಲಿ ನಡೆದ ಅಜೀತ್ ಕುಮಾರ್ (32) ಕೊಲೆ ಪ್ರಕರಣದಲ್ಲಿ ದೇವಿಚರಣ್ ವಿಶ್ವಕರ್ಮ ದೋಷಿ ಎಂದು ತೀರ್ಪು ನೀಡಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ಮತ್ತು 52,000 ರೂ.ದಂಡವನ್ನು ವಿಧಿಸಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SC-ST) ಅನಿಲ್ ಕುಮಾರ್ ಶುಕ್ಲಾ ಅವರು ಈ ಘಟನೆ  2022ರ ಜು.18ರಂದು ಸಂಭವಿಸಿದೆ. ಆಕಾಶ್ ಮಿಶ್ರಾ ಎಂಬವರು ಮನೆ ನಿರ್ಮಾಣ ಮಾಡುತ್ತಿದ್ದರು ಮತ್ತು ದೇವಿಚರಣ್ ವಿಶ್ವಕರ್ಮ ಮತ್ತು ಮೃತ ಅಜೀತ್ ಕುಮಾರ್ ಅಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಅಜೀತ್ ಕುಮಾರ್ ಇತರ ಕಾರ್ಮಿಕರಿಗೆ ಚಹಾ ನೀಡುತ್ತಿದ್ದಾಗ ವಿಶ್ವಕರ್ಮ ಜಾತಿ ನಿಂದನೆ ಮಾಡಿದ್ದಾನೆ. ಇದಕ್ಕೆ ಅಜೀತ್ ಕುಮಾರ್ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಲ್ಲಿದ್ದ ಬಲವಾದ ಆಯುಧದಿಂದ ವಿಶ್ವಕರ್ಮ, ಅಜೀತ್ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿದ್ದ ಅಜೀತ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

ಘಟನೆ ಬಳಿಕ ಆರೋಪಿ ದೇವಿಚರಣ್ ವಿಶ್ವಕರ್ಮ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆ ಬಳಿಕ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇವಿಚರಣ್ ವಿಶ್ವಕರ್ಮ ಅಪರಾಧಿ ಎಂದು ತೀರ್ಪು ವಿಧಿಸಿದೆ.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...