Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ  ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.

ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.

ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ ಎಂದು ಆರೋಪಿಸಿದ್ದಾನೆ.

4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಇಂದು ನಡೆದ ಯಹೋವನ ಸಾಕ್ಷಿಗಳ ಧಾರ್ಮಿಕ ಪ್ರಾರ್ಥನೆ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಪ್ರಾರ್ಥನೆಯ ಮಧ್ಯೆ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಟಿಫಿನ್ ಬಾಕ್ಸ್ ನಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

45 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 18 ಜನರು ಐಸಿಯುನಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಫೋಟವನ್ನು ದುರದೃಷ್ಟಕರ ಎಂದು ಹೇಳಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ಸರಣಿ ಸ್ಪೋಟ ಘಟನೆ ಗಂಭೀರವಾದುದು; ಸಿಎಂ ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...