Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...