Homeಮುಖಪುಟಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ 'ಧೋಕೆಬಾಜ್' ಎಂದು...

ಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ ‘ಧೋಕೆಬಾಜ್’ ಎಂದು ಬರೆದಿದ್ದ ಕೊಲೆಗಾರ 

- Advertisement -
- Advertisement -

ಪಂಜಾಬ್‌ನಲ್ಲಿ ಭಾರಿ ಸಂಚಲನ ಸೃಷ್ಠಿಸಿದ್ದ ಸರಣಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ 18 ತಿಂಗಳ ಅವಧಿಯಲ್ಲಿ 11 ಜನರನ್ನು ಹತ್ಯೆಗೈದಿದ್ದು, ಶವವೊಂದರ ಮೇಲೆ ‘ಧೋಕೆಬಾಜ್’ (ಮೋಸಗಾರ) ಎಂದು ಬರೆದಿದ್ದ ಎಂದು ತಿಳಿದುಬಂದಿದೆ.

ಲಿಫ್ಟ್ ನೀಡುವುದಾಗಿ ಹೇಳಿ ಕಾರು ಹತ್ತಿಸಿಕೊಳ್ಳುತ್ತಿದ್ದ ಈತ, ನಂತರ ದರೋಡೆ ಮಾಡುತ್ತಿದ್ದ. ಮಂಗಳವಾರ ರೂಪನಗರ ಜಿಲ್ಲೆಯಿಂದ ಕೊಲೆಗಾರನ್ನು ಬಂಧಿಸಲಾಗಿದೆ. ಆರೋಪಿಯನ್ನು 33 ವರ್ಷದ ರಾಮ್ ಸರೂಪ್ ಎಂದು ಗುರುತಿಸಲಾಗಿದ್ದು, ಆತ ಹೋಶಿಯಾರ್‌ಪುರದ ಗರ್ಶಂಕರ್‌ನ ಚೌರಾ ಗ್ರಾಮದ ನಿವಾಸಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಬಲಿಪಶುಗಳೆಲ್ಲರೂ ಪುರುಷರಾಗಿದ್ದು, ಮುಖ್ಯವಾಗಿ ಅವರಿಗೆ ಲಿಫ್ಟ್ ನೀಡಿದ ನಂತರ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಎನ್ನಲಾಗಿದೆ. ಆರೋಪಿಯು ನಂತರ ಕೊಲೆ ಮಾಡಿದ ವ್ಯಕ್ತಿಗಳನ್ನು ದರೋಡೆ ಮಾಡಿ, ಸಂತ್ರಸ್ತರು ಹಣ ನೀಡಲು ನಿರಾಕರಿಸಿದ ನಂತರ ಅವರನ್ನು ಕೊಲ್ಲುತ್ತಿದ್ದ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ತನ್ನ ಬಲಿಪಶುಗಳನ್ನು ತುಂಡು ಬಟ್ಟೆಯಿಂದ ಕತ್ತು ಹಿಸುಕಿದರೆ, ಇತರ ಪ್ರಕರಣಗಳಲ್ಲಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕೊಲೆಯಲ್ಲಿ, ಆರೋಪಿಯು ಬಲಿಪಶುವಿನ ಬೆನ್ನಿನ ಮೇಲೆ ‘ಧೋಕೆಬಾಜ್’ (ವಂಚಕ) ಎಂದು ಬರೆದಿದ್ದಾನೆ. ಮೃತ ವ್ಯಕ್ತಿ ಖಾಸಗಿ ಕಾರ್ಖಾನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕರಾಗಿದ್ದರು.

ಆಗಸ್ಟ್ 18 ರಂದು ಟೋಲ್ ಪ್ಲಾಜಾ ಮೋದ್ರಾದಲ್ಲಿ ಚಹಾ ಮತ್ತು ನೀರು ಬಡಿಸುತ್ತಿದ್ದ 37 ವರ್ಷದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಆರಂಭದಲ್ಲಿ ಬಂಧಿಸಲಾಯಿತು. ವಿಚಾರಣೆ ವೇಳೆ ಸರೂಪ್ ಅವರು ಇನ್ನೂ 10 ಜನರನ್ನು ಕೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾನೆ. ಈ ಪೈಕಿ ಐದು ಪ್ರಕರಣಗಳು ಈವರೆಗೆ ದೃಢಪಟ್ಟಿದ್ದು, ಉಳಿದ ಕೊಲೆಗಳ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 5 ರಂದು 34 ವರ್ಷದ ಟ್ರ್ಯಾಕ್ಟರ್ ರಿಪೇರಿ ಮಾಡುವವರ ಕೊಲೆ ಮತ್ತು ಜನವರಿ 24 ರಂದು ಕಾರಿನಲ್ಲಿ ಪತ್ತೆಯಾದ ಯುವಕನನ್ನು ಹತ್ಯೆ ಮಾಡಿದ ಪ್ರಕರಣಗಳು ಸೇರಿವೆ. ಹೋಶಿಯಾರ್ಪುರ್ ಮತ್ತು ಫತೇಗಢ್ ಜಿಲ್ಲೆಗಳಲ್ಲಿ ಕೃತ್ಯ ನಡೆದಿವೆ. ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದಕ ವ್ಯಸನಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರಣಿ ಹಂತಕನ ಪ್ರಕಾರ, ಅವನು ಮೃತರ ಪಾದಗಳನ್ನು ಸ್ಪರ್ಶಿಸುತ್ತಿದ್ದನು ಮತ್ತು ಅವರನ್ನು ಕೊಂದ ನಂತರ ಪಶ್ಚಾತ್ತಾಪ ಪಡುತ್ತಿದ್ದನು. ನಶೆ ಏರಿದ ನಂತರವೇ ಅಪರಾಧಗಳನ್ನು ಎಸಗಿರುವುದಾಗಿ ಒಪ್ಪಿಕೊಂಡಿರುವ ಆತ, ಇನ್ನು ಮುಂದೆ ಅವುಗಳನ್ನು ನೆನಪಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾನೆ.

ಆರೋಪಿಯು ಮೂರು ಮದುವೆಯಾಗಿದ್ದನೆಂದು ವರದಿಯಾಗಿದೆ. ಆದರೆ, ಆತನ ಸಲಿಂಗಿಯಾಗಿದ್ದ ಕಾರಣ ಎರಡು ವರ್ಷಗಳ ಹಿಂದೆ ಆತನ ತನ್ನ ಮನೆ ತೊರೆದಿದ್ದ.

“ನಾವು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌| ಸೂರತ್‌ ಪೊಲೀಸರ ಕಾರ್ಯಾಚರಣೆ; 10, 12ನೇ ತರಗತಿವರೆಗೆ ಓದಿದ್ದ ನಕಲಿ ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...