Homeಕರ್ನಾಟಕಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

ಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ ಎಂದಿದ್ದಾರೆ.

ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ. ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ. ಈಗಷ್ಟೆ ಆ ಇಬ್ಬರು ಹುತಾತ್ಮ ಚಿಂತಕರನ್ನು ಕೊಂದವರ ವಿಚಾರಣೆ ಪ್ರಾರಂಭವಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

‘ಸರ್ವಜನಾಂಗದ ಶಾಂತಿಯ ತೋಟ’ ಎಂದು ಹೆಸರಾದ ಕನ್ನಡ ನಾಡಿನಲ್ಲಿ ಸಮರ್ಥವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಬೇಕಾದ ತುರ್ತು ಅಗತ್ಯವಿದೆ. ಯಾಕೆಂದರೆ ನಾಡಿನಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಆದ್ದರಿಂದ ಸರ್ಕಾರ ಕ್ರಿಯಾಶೀಲವಾಗಬೇಕು. ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ, ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...