Homeಮುಖಪುಟಮುಂದುವರಿದ ರಾಜೀನಾಮೆ ಸರಣಿ: ಕಾಂಗ್ರೆಸ್‌ ತೊರೆದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ

ಮುಂದುವರಿದ ರಾಜೀನಾಮೆ ಸರಣಿ: ಕಾಂಗ್ರೆಸ್‌ ತೊರೆದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ

- Advertisement -
- Advertisement -

ಮಾಜಿ ಪ್ರಧಾನಿ, ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೆ, ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ, ವಂದನೆಗಳು’ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ಮತ್ತು ಹರಿಕೃಷ್ಣ ಶಾಸ್ತ್ರಿಯವರ ಪುತ್ರರಾಗಿರುವ ವಿಭಾಕರ್ ಶಾಸ್ತ್ರಿ ಅವರು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶಕ್ಕೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ನಂಬಿ ಅವರು ಬಿಜೆಪಿಗೆ ಸೇರುವುದಾಗಿ ಘೋಷಿಸಿದರು. ‘ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿಯವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ನ ಹಲವು ಮುಂಚೂಣಿ ನಾಯಕರು ಪಕ್ಷ ತೊರೆದಿದ್ದಾರೆ. ಅಶೋಕ್ ಚವಾಣ್, ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ, ಜ್ಯೋತಿರಾದಿತ್ಯ ಸಿಂಧಿಯಾ, ಹಿಮಂತ ಬಿಸ್ವಾ ಶರ್ಮಾ, ಜಿತಿನ್ ಪ್ರಸಾದ್, ಪ್ರಿಯಾಂಕಾ ಚತುರ್ವೇದಿ, ಸುಶ್ಮಿತಾ ದೇವ್, ಆರ್‌ಪಿಎನ್ ಸಿಂಗ್, ಜೈವೀರ್ ಶೆರ್ಗಿಲ್ ಸೇರಿದಂತೆ ಕಾಂಗ್ರೆಸ್‌ನ ಸರಣಿ ನಿರ್ಗಮನಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read