Homeಕರ್ನಾಟಕಸೆ.13 ರಿಂದ ವಿಧಾನ ಮಂಡಲ ಅಧಿವೇಶನ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದ

ಸೆ.13 ರಿಂದ ವಿಧಾನ ಮಂಡಲ ಅಧಿವೇಶನ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದ

- Advertisement -
- Advertisement -

ಕರ್ನಾಟಕ ವಿಧಾನ ಮಂಡಲ ಅಧಿವೇಶನ ಸೆಪ್ಟೆಂಬರ್‌‌ 13 ರ ಸೋಮವಾರದಂದು ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಇದೇ ವೇಳೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಕೊರತೆ ಸಹಿತ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜಾಗಿದೆ.

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿವಾದಾತ್ಮಕ ಹೇಳಿಕೆಗಳು ಹಾಗೂ ಅವುಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದ ಬಿಜೆಪಿ ಮುಖಂಡರ ಹೇಳಿಕೆಗಳು ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ: ದಲಿತ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 13 ರಂದು ‘ಚಲೋ ಶ್ರೀನಿವಾಸಪುರ’ ಆಂದೋಲನ

ಜೊತೆಗೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ನಡೆದ ಜಾತಿ ಗಣತಿ ವರದಿ ಸುತ್ತಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಕೋವಿಡ್ ಸಾವಿನ ಕುರಿತ ಸರ್ಕಾರದ ಸುಳ್ಳು ಅಂಕಿ-ಅಂಶಗಳು. ಕೋವಿಡ್ ಸಂದರ್ಭದಲ್ಲಿ ವಿವಿಧ ಸಮುದಾಯಗಳಿಗೆ ಸರ್ಕಾರ ಘೋಷಿಸಿದ್ದ ಪರಿಹಾರ. ಅತಿವೃಷ್ಟಿ ಸಂತ್ರಸ್ತರ ಮೇಲಿನ ನಿರ್ಲಕ್ಷ್ಯ, ರಾಜ್ಯದ ಅಭಿವೃದ್ಧಿಯಲ್ಲಿ ಆಗಿರುವ ಹಿನ್ನಡೆ ಹಾಗೂ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಅಧಿವೇಶನ ಚರ್ಚೆಯಲ್ಲಿ ಮುನ್ನಲೆಗೆ ಬರಲಿವೆ ಎಂದು ಹೇಳಲಾಗುತ್ತಿದೆ.

ಅಧಿವೇಶನದಲ್ಲಿ ಜೆಡಿಎಸ್ ನಡೆ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಸೆ.13ರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಒಕ್ಕೂಟ ಸರ್ಕಾರದ ಅನುದಾನ, ಜಿಎಸ್‍ಟಿ ಬಾಕಿ ವಿಚಾರಗಳ ಜೊತೆಗೆ ರಾಜ್ಯದ ಜ್ವಲಂತ ಸಮಸ್ಯೆಗಳು ಈ ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಸೆಪ್ಟೆಂಬರ್‌‌ 13 ರಿಂದ ಆರಂಭವಾಗಲಿರುವ ಅಧಿವೇಶನ ಒಟ್ಟು 10 ದಿನಗಳ ಕಾಲ ನಡೆಯಲಿದ್ದು, ಸಾರ್ವಜನಿಕ ವಲಯದಲ್ಲಿ ಕುತೂಹಲ ಮತ್ತು ನಿರೀಕ್ಷೆಗಳನ್ನು ಸೃಷ್ಟಿಸಿದೆ.

“ಸೆ.13ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ಗಂಟೆಯ ವರೆಗೆ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವೇಳೆ ಕಾನೂನು ಭಂಗವನ್ನುಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದು, ಶಸ್ತ್ರ, ದೊಣ್ಣೆ, ಮಾರಕಾಸ್ತ್ರ ಒಯ್ಯುವುದು, ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ನಿರ್ಬಂಧಿಸಿದ್ದು, ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ, ಪ್ರಚೋಧನಕಾರಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ತಿಳಿಸಿದ್ದಾರೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

0
ಕೇರಳದಲ್ಲಿ ಅದಾನಿ ಸಮೂಹದ ಮಾಲೀಕತ್ವದ ಬಂದರಿನ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಚರ್ಚ್‌ವೊಂದರ ಬ್ಯಾಂಕ್ ಖಾತೆಗಳನ್ನು ಮೋದಿ ಸರಕಾರ ಸ್ಥಗಿತಗೊಳಿಸಿರುವ ಆರೋಪ ಕೇಳಿ ಬಂದಿದೆ. ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಮತದಾನಕ್ಕೆ ಇನ್ನೇನು ಎರಡೇ ದಿನಗಳು...