Homeದಲಿತ್ ಫೈಲ್ಸ್ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಕೇನಹಳ್ಳಿ ಗ್ರಾಮದ ಸರ್ವೆ ನಂ 58ರ ಸರ್ಕಾರಿ ಜಾಗದಲ್ಲಿ ವಾಸವಿದ್ದ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯ ನೇತೃತ್ವದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, “ಘಟನೆ ನಡೆದ 5 ದಿನ ಕಳದರೂ ಆರೋಪಿಗಳನ್ನು ಬಂಧಿಸಿಲ್ಲ, ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರದ ಸಾಮಾಜಿಕ ಕಾರ್ಯಕರ್ತರಾದ ರಾಜು ಸಣ್ಣಕ್ಕಿಯವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಕನಕೇನಹಳ್ಳಿಯ ಸರ್ವೆ ನಂ58 ರಲ್ಲಿ 3.20 ಎಕರೆ ಇನಾಮ್ತಿ ಸರ್ಕಾರಿ ಜಮೀನಿದೆ. ಅಲ್ಲಿ ಗ್ರಾಮದ ಹೆಚ್ಚಿನ ದಲಿತರು ಮತ್ತು ಕೆಲ ಇತರ ಸಮುದಾಯಗಳು ಗುಡಿಸಲು, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಮುತ್ತುರಾಜೇಗೌಡ ಎಂಬ ಸವರ್ಣೀಯ ಸಮುದಾಯದ ವ್ಯಕ್ತಿ ಅಲ್ಲಿಯೇ ಮನೆ ಕಟ್ಟಿಕೊಂಡಿದ್ದು, ದಲಿತರನ್ನು ಅಲ್ಲಿಂದ ಒಕ್ಕಲೆಬ್ಬಿಸಿ ಇಡೀ ಜಮೀನನ್ನು ಕಬಳಿಸಲು ಯತ್ನಿಸಿದ್ದರು. ಅವರು ಮತ್ತು ಅವರ ಪುತ್ರ ಸೇರಿಕೊಂಡು ಮೇ 03ರ ರಾತ್ರಿ 10.30ರ ಸಮಯದಲ್ಲಿ ನಾಗಮ್ಮ ಮತ್ತು ಹನುಮಕ್ಕನವರ ದಲಿತ ಕುಟುಂಬಗಳ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ” ಎಂದರು.

ಮುತ್ತುರಾಜೇಗೌಡ ಇಡೀ ಜಮೀನು ತನಗೆ ಸೇರಬೇಕೆಂದು ಎ.ಸಿ, ಡಿ.ಸಿ ಮತ್ತು ಕೆಳ ಹಂತದ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದಾಗ ಅವೆಲ್ಲವೂ ವಜಾಗೊಂಡಿವೆ. ಈಗ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲವು ಸಹ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಿರುವಾಗ ಹೆದರಿಸಿ, ಬೆದರಿಸಿ ದಲಿತರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಈ ರೀತಿ ಬೆಂಕಿ ಹಚ್ಚಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ಮೊದ ಮೊದಲು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಆದರೆ ಪ್ರತಿಭಟನೆಗಳು ನಡೆದ ನಂತರ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಆರೋಪಿಗಳನ್ನು ಬಂಧಿಸಿಲ್ಲ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತ ದಲಿತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ದಲಿತ್ ಫೈಲ್ಸ್: ದಲಿತ ದಮನಿತರ ಮೇಲಿನ ದೌರ್ಜನ್ಯಗಳು-ಪ್ರತಿರೋಧದ ಸುದ್ದಿಗಳನ್ನು ಇಲ್ಲಿ ಓದಿ

ಗ್ರಾಮದಲ್ಲಿ ದಲಿತರಿಗೆ ಸಣ್ಣ ಸಣ್ಣ ಮನೆಗಳಷ್ಟೆ ಇವೆ. ಹಾಗಾಗಿ ಅವರು ಅನಿವಾರ್ಯವಾಗಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ತಹಶೀಲ್ದಾರ್‌ರವರು ಬೇರೆಡೆ 11 ಕುಂಟೆ ಜಾಗ ನೀಡುವುದಾಗಿ ಹೇಳಿದ್ದಾರೆ. ಆದರೆ 50ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೆ ಆ ಜಾಗ ಸಾಲುವುದಿಲ್ಲ ಮಾತ್ರವಲ್ಲ, ಅದು ನಿಜವಾಗಿಯೂ ದಲಿತರ ಕೈಗೆ ಸಿಗುವುದು ಅಷ್ಟು ಸುಲಭವಲ್ಲ. ಹಾಗಾಗಿ ಸದ್ಯ ದಲಿತರು ಇರುವ ಜಾಗವನ್ನು ಅವರ ಹೆಸರಿಗೆ ಮಾಡಿ ಹಕ್ಕುಪತ್ರ ನೀಡಬೇಕು. ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಪ್ರಜಾ ವಿಮೋಚನಾ ಚಳವಳಿಯ ಅಧ್ಯಕ್ಷರಾದ ಮುನಿ ಆಂಜನಪ್ಪ ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪೊಲೀಸರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ ಎಂದು ಡಿವೈಎಸ್‌ಪಿ ನಾಗರಾಜು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...