Homeಮುಖಪುಟಚಂದ್ರಬಾಬು ನಾಯ್ಡುಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಚಂದ್ರಬಾಬು ನಾಯ್ಡುಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ವಿವಿಧ ಪ್ರಕರಣಗಳಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ.

”ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಗಲಭೆ ಪ್ರಕರಣಗಳಲ್ಲಿ ಚಂದ್ರಬಾಬು ನಾಯ್ಡು ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ” ಎಂದು ವಕೀಲ ಕೃಷ್ಣ ಮೂರ್ತಿ ಹೇಳಿದ್ದಾರೆ.

ಮೇಲಿನ ಮೂರು ಪ್ರಕರಣದಲ್ಲಿ ತಮಗೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಚಂದ್ರಬಾಬು ನಾಯ್ಡು ಅರ್ಜಿ ಸಲ್ಲಿಸಿದ್ದರು. ನಾಯ್ಡು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಈ ಅರ್ಜಿಗಳ ವಾದ – ಪ್ರತಿವಾದಗಳು ಕಳೆದ ವಾರ ಪೂರ್ಣಗೊಂಡಿದ್ದು, ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಲಾಗಿತ್ತು.

ಚಂದ್ರಬಾಬು ಪರವಾಗಿ ಸುಪ್ರೀಂ ಕೋರ್ಟ್‌ನ ವಕೀಲ ಸಿದ್ಧಾರ್ಥ ಲೂತ್ರಾ ಹಾಗೂ ಸಿಐಡಿ ಪರವಾಗಿ ಎಜಿ ಶ್ರೀರಾಮ್ ವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಚಂದ್ರಬಾಬು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಟಿಡಿಪಿ ಆಡಳಿತದ ಅವಧಿಯಲ್ಲಿನ ರಾಜಧಾನಿ ಅಮರಾವತಿಯ ಇನ್ನರ್ ರಿಂಗ್ ರೋಡ್ ಮಹಾ ಯೋಜನೆ ರೂಪಿಸುವಲ್ಲಿ ಅವ್ಯವಹಾರ ನಡೆದಿದೆ ಎಂದು ವೈಎಸ್‌ಆರ್‌ಸಿಪಿ ಶಾಸಕ ಅಲ್ಲಾ ರಾಮಕೃಷ್ಣ ರೆಡ್ಡಿ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಸಿಐಡಿ ಕಳೆದ ವರ್ಷ ಮೇ 9ರಂದು ಮಾಜಿ ಸಿಎಂ ಚಂದ್ರಬಾಬು ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಚಂದ್ರಬಾಬು ಅವರನ್ನು ಸಿಐಡಿ ಪ್ರಕರಣದಲ್ಲಿ A1 ಆರೋಪಿ ಎಂದು ಹೆಸರಿಸಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಕಳೆದ ತಿಂಗಳು ಬಂಧಿಸಿದ್ದು, ಬಂಧನ ಖಂಡಿಸಿ ಹಲವು ಟಿಡಿಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಳ್ಳು ಆರೋಪಗಳನ್ನು ಹೊರಿಸುವ ಮೂಲಕ ಅವರನ್ನು ಬಂಧಿಸಲಾಗಿದೆ ಎಂದು ಕಿಡಿ ಕಾರುತಿದ್ದಾರೆ. ಆರೋಪ ಮತ್ತು ಪ್ರತ್ಯಾರೋಪದಿಂದ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.

ಶನಿವಾರ ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಮತ್ತು ತೆಲುಗು ದೇಶಂ ಪಕ್ಷದ ಹಲವು ಮುಖಂಡರು ಟಿಡಿಪಿ ವರಿಷ್ಠರ ಬಂಧನ ಖಂಡಿಸಿ ಪಕ್ಷದ ತಾತ್ಕಾಲಿಕ ಕ್ಯಾಂಪ್ ಕಚೇರಿಯಲ್ಲಿ ದೀಪಗಳನ್ನು ಆಫ್ ಮಾಡಿ ಮಣ್ಣಿನ ದೀಪಗಳನ್ನು ಬೆಳಗಿಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡುಗೆ ಸಧ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್​​ 9ರಂದು ವಿಚಾರಣೆ ಮುಂದೂಡಿದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...