Homeಮುಖಪುಟಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

ಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್‌ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ತನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ವಿವರಣೆಯನ್ನು ಕೇಳಿದ ನಂತರ ಅವರು 2023 ರಲ್ಲಿ ಬಿಜೆಪಿ ಸೇರಿದ್ದರು.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಿಂಗ್, “ನಾನು ನನ್ನ ಬಿಜೆಪಿ ಸದಸ್ಯತ್ವವನ್ನು ನವೀಕರಿಸಿಲ್ಲ, ನನ್ನ ಉದ್ದೇಶಗಳನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾನು ಶೀಘ್ರದಲ್ಲೇ ನನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುತ್ತೇನೆ” ಎಂದು ಬಹಿರಂಗಪಡಿಸಿದರು.

ಕಳೆದ 18 ತಿಂಗಳಿಂದ ಬಿಜೆಪಿಯಲ್ಲಿ ಯಾವುದೇ ಮಹತ್ವದ ಜವಾಬ್ದಾರಿಯನ್ನು ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ”ನನಗೆ ರಾಜಕೀಯ ಸಂಘಟನೆಯನ್ನು ನಡೆಸಿ ಸುದೀರ್ಘ ಅನುಭವವಿರುವುದರಿಂದ ಅದನ್ನು ಪಕ್ಷದ ಲಾಭಕ್ಕಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ನಾಯಕತ್ವದೊಂದಿಗೆ ಸಂವಹನ ನಡೆಸಿದ್ದೇನೆ. ಆದರೆ, ಬಿಜೆಪಿ ವಿಭಿನ್ನ ಶೈಲಿಯ ಕಾರ್ಯವನ್ನು ಹೊಂದಿದೆ ಮತ್ತು ನಾನು ಅದನ್ನು ಪ್ರಶಂಸಿಸುತ್ತೇನೆ” ಎಂದು ಅಸಮಾಧಾನ ಹೊರಹಾಕಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಯಿಂದ ನಿರ್ಗಮಿಸುವುದನ್ನು ಮತ್ತು 2022 ರ ಆಗಸ್ಟ್‌ನಲ್ಲಿ ಮಹಾಘಟಬಂಧನ್‌ನೊಂದಿಗೆ ಅವರ ನಂತರದ ಹೊಂದಾಣಿಕೆಯನ್ನು ಎದುರಿಸಲು ಸಿಂಗ್ ಅವರ ಬಿಜೆಪಿ ಪ್ರವೇಶವನ್ನು ಒಂದು ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿತ್ತು. 2024 ರ ಜನವರಿಯಲ್ಲಿ ನಿಈಶ್ ಕುಮಾರ್ ಅವರು ಎನ್‌ಡಿಎಗೆ ಮರಳಿದ ನಂತರ, ಸಿಂಗ್ ಅವರು ಪಕ್ಷದೊಳಗೆ ರಾಜಕೀಯವಾಗಿ ಪ್ರತ್ಯೇಕತೆಯನ್ನು ಕಂಡುಕೊಂಡರು.

ತಮ್ಮ ಹಿಂದಿನ ಪಕ್ಷವಾದ ಜನತಾ ದಳ ಯುನೈಟೆಡ್ (ಜೆಡಿಯು) ಗೆ ಮರಳುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಸಿಂಗ್ ಈದೃಢವಾಗಿ ತಿರಸ್ಕರಿಸಿದರು. “ನನಗೆ ನನ್ನದೇ ಆದ ರಾಜಕೀಯ ಶಕ್ತಿ ಇರುವುದರಿಂದ ಜನತಾ ದಳಕ್ಕೆ ಮರಳುವ ಅಗತ್ಯವಿಲ್ಲ; ನಿತೀಶ್ ಕುಮಾರ್ ಅವರೊಂದಿಗೆ ಇಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಆದರೆ, ನಮ್ಮ ನಡುವೆ ಹೊಂದಾಣಿಕೆಗೆ ಪ್ರಯತ್ನ ನಡೆದಿಲ್ಲ” ಎಂದರು.

2023 ರಲ್ಲಿ ಜೆಡಿಯು ತೊರೆದ ನಂತರ, ಸಿಂಗ್ ನಿತೀಶ್ ಕುಮಾರ್ ಮೇಲೆ ಕಟುವಾದ ದಾಳಿಯನ್ನು ಪ್ರಾರಂಭಿಸಿದರು. ಅವರನ್ನು ‘ಪಾಲ್ಟಿ ಮಾರ್’ (ನಿಷ್ಠೆಯನ್ನು ಬದಲಾಯಿಸುವ ವ್ಯಕ್ತಿ) ಎಂದು ಕರೆದರು.

ಭ್ರಷ್ಟಾಚಾರ ಆರೋಪದ ಮೇಲೆ ಪಕ್ಷವು ಅವರಿಗೆ ನೋಟಿಸ್ ಕಳುಹಿಸಿದ ನಂತರ ಆರ್‌ಸಿಪಿ ಸಿಂಗ್ ಜೆಡಿಯು ತೊರೆದಿದ್ದರು. ನಿತೀಶ್ ಕುಮಾರ್ ತಮ್ಮ ಏಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ ಎಂದು ರಾಜೀನಾಮೆ ನೀಡಿದ ನಂತರ ಹೇಳಿದ್ದ ಅವರು, ಜೆಡಿಯು ಪಕ್ಷವನ್ನು “ಮುಳುಗುತ್ತಿರುವ ಹಡಗು” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ; ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...