ಹಲವು ಸಮುದಾಯಗಳಿಂದ ಮೀಸಲಾತಿಗಾಗಿ ಬೇಡಿಕೆಗಳು, 50% ಗಿಂತ ಅಧಿಕ ಮೀಸಲಾತಿ, ಸುಪ್ರೀಂ ಕೋರ್ಟ್ ತೀರ್ಪುಗಳು ಮತ್ತು ಕಾನೂನು ಚೌಕಟ್ಟು ಮುಂತಾದ ಎಲ್ಲಾ ವರದಿಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ತ್ರಿಸದಸ್ಯ ಸಮಿತಿಯನ್ನು ನೇಮಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಯಿ ತಿಳಿಸಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಒಬ್ಬ ನಿವೃತ್ತ ಅಧಿಕಾರಿ ಮತ್ತು ಸಮಾಜ ವಿಜ್ಞಾನಿ ಸಮಿತಿಯ ಸದಸ್ಯರಾಗಿರುತ್ತಾರೆ. ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯ ಅಧಿಕಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿಕೊಳ್ಳಳಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
‘ಪಂಚಮಸಾಲಿ ಸಮುದಾಯ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಬೇಡಿಕೆ ಇಟ್ಟಿದೆ. ಕುರುಬರು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವಂತೆ ಕೇಳುತ್ತಿದ್ದಾರೆ. ವಾಲ್ಮೀಕಿ ಸಮುದಾಯ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸುತ್ತಿದೆ. ವೀರಶೈವ, ಹಾಲುಮತ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಬೇಡಿಕೆ ಇಟ್ಟಿವೆ’ ಎಂದಿದ್ದಾರೆ.
ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ
So a 3-member high level committee has been appointed. It will be headed by a retired High Court judge who will be its Chairman. There will be one administrator and one person who will be well versed in social science: Karnataka Home Minister Basavaraj Bommai https://t.co/3tnjPqmuSr
— ANI (@ANI) March 3, 2021
ಎಲ್ಲಾ ಸಮುದಾಯಗಳ ಬೇಡಿಕೆಗೆ ಒಪ್ಪಿಕೊಂಡರೇ ಮೀಸಲಾತಿಯ ಪ್ರಮಾಣ ಶೇಕಡಾ 50 ಮೀರುತ್ತದೆ. ಆದರೆ, ಶೇಕಡಾ 50 ಕ್ಕಿಂತ ಮೀಸಲಾತಿ ಹೆಚ್ಚಾಗಬಾರದು ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಾಗಾಗಿ ಈ ಎಲ್ಲ ವಿಷಯಗಳ ಕುರಿತು ತ್ರಿಸದಸ್ಯ ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಲಿದೆ’ ಎಂದರು.
ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ


