HomeಅಂಕಣಗಳುKarnataka against SIRSIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

- Advertisement -
- Advertisement -

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ.

ಎಸ್‌ಐಆರ್(SIR) ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಮತದಾರರಿಗೆ ಗೊಂದಗಳು ಉಂಟಾಗುವುದು ಸಾಮಾನ್ಯ ಇಂತಹ ಸಂದರ್ಭದಲ್ಲಿ , ಸಾರ್ವಜನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಗೊಂದಲಗಳಿಗೆ ಪರಿಹಾರಕಂಡುಕೊಳ್ಳಲು ಸರ್ಕಾರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು 7 ದಿನಗಳ ಒಳಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೌಂಟರ್‌ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು ಹೆಲ್ಪ್‌ ಡೆಸ್ಕ್‌ಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಯ ವಾರ್ಡ್‌ ಕಚೇರಿಯಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ, ಸ್ಕ್ಯಾನಿಂಗ್ ಮತ್ತು ಅಗತ್ಯ ಮೂಲಸೌಕರ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೌಂಟರ್ ಸ್ಥಾಪಿಸಬೇಕು. ಅಟಲ್ ಜನಸ್ನೇಹಿ ಕೇಂದ್ರಗಳು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, CSC ಗಳು ಮತ್ತು ಇತರೆ ಅಧಿಕೃತ ಕೇಂದ್ರಗಳು ಅರ್ಜಿಗಳನ್ನು ಪ್ರಕ್ರಿಯೆಗೊಳಿಸುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಇಂದಿನಿಂದ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಾದ್ಯಂತ ಬಿಎಲ್‌ಒಗಳು ಮನೆ ಬಾಗಿಲಿಗೆ ಬಂದು ಎನ್ಯುಮರೇಷನ್ ಫಾರ್ಮ್‌ ಕೊಡಲಿದ್ದಾರೆ. ಮತದಾರರ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಈ ಫಾರ್ಮ್‌ಗಳನ್ನು ತುಂಬಬೇಕು. ಆ ನಂತರ, ಆಗಸ್ಟ್‌ 5ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆ ಪಟ್ಟಿಯಲ್ಲಿ ಎನ್ಯುಮರೇಷನ್ ಫಾರ್ಮ್‌ ಸಲ್ಲಿಸಿದ್ದ ಪ್ರತಿಯೊಬ್ಬರ ಹೆಸರುಗಳು ಇರುತ್ತವೆ. ಆದರೆ, ಲಕ್ಷಾಂತರ ಮಂದಿಗೆ ತಮ್ಮ ಅರ್ಹತೆಯನ್ನು ಸಾಬೀತು ಪಡಿಸುವಂತೆ ಚುನಾವಣಾ ಆಯೋಗ ನೋಟಿಸ್‌ ಕೊಡುತ್ತದೆ. ಅಕ್ಷರಸ್ಥರು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಾಸ್‌ಪೋರ್ಟ್‌ ಸೌಲಭ್ಯ ಹೊಂದಿರುವರರು ಪಾಸ್‌ಪೋರ್ಟ್‌ಗಳನ್ನು ಒದಗಿಸಬಹುದು. ಆದರೆ, ಅನಕ್ಷರಸ್ಥರು ಮತ್ತು ಬಡ-ಹಿಂದುಳಿದ ದಾಖಲೆ ರಹಿತರು ಸಮಸ್ಯೆಗೆ ಸಿಲುಕಲಿದ್ದಾರೆ.

ಅಂತಹ ದಾಖಲೆ ರಹಿತರ ಮತದಾನ ಹಕ್ಕನ್ನು ರಕ್ಷಿಸಲು ಜಾತಿ ಪ್ರಮಾಣಪತ್ರ ಮತ್ತು ಶಾಶ್ವತ ನಿವಾಸ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ಒದಗಿಸಬಹುದು, ಆ ಮೂಲಕ ತನ್ನ ನಾಗರಿಕರನ್ನು ರಕ್ಷಿಸಿಕೊಳ್ಳಬಹುದು. ಈ ಹಿಂದೆ, ಕೇರಳ ಸರ್ಕಾರವೂ ಇಂತಹ ಕ್ರಮವನ್ನು ಕೈಗೊಂಡಿತ್ತು. ಬಹುಸಂಖ್ಯಾತರು ಮತಪಟ್ಟಿಯಿಂದ ಹೊರಗುಳಿಯದಂತೆ ರಕ್ಷಿಸಿತು. ಇದೀಗ, ಕರ್ನಾಟಕ ಸರ್ಕಾರವು ಅಂತಹ ಮಹತ್ವದ ಹೆಜ್ಜೆ ಇಟ್ಟಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...