Homeಮುಖಪುಟಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; 7 ಮಂದಿ ಸಾವು

ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; 7 ಮಂದಿ ಸಾವು

- Advertisement -
- Advertisement -

ಅಕ್ರಮವಾಗಿ ಪಟಾಕಿ ಕಾರ್ಖಾನೆಯಾಗಿ ಬಳಸುತ್ತಿದ್ದ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಸ್ಥಳೀಯ ಮೂಲಗಳ ಪ್ರಕಾರ, ಬರಾಸತ್‌ನ  ದತ್ತಪುಕೂರ್‌ನಲ್ಲಿರುವ ಮನೆಯಲ್ಲಿ ಅನುಮತಿಯಿಲ್ಲದೆ ಪಟಾಕಿ ಉತ್ಪಾದನೆಗೆ ಕಚ್ಚಾ ವಸ್ತುಗಳನ್ನು ಸಂಗ್ರಹಿಸಲಾಗಿದೆ.

ಸ್ಥಳದಲ್ಲಿ  ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆಯನ್ನು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬರಾಸತ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸ್ಥಳೀಯರು, ದತ್ತಪುಕರ್‌ನ ನೀಲ್‌ಗುಂಜ್ ಪ್ರದೇಶದಲ್ಲಿ ಬೆಳಿಗ್ಗೆ 10.40 ರ ಸುಮಾರಿಗೆ ಎರಡು ಅಂತಸ್ತಿನ ಮನೆಯೊಳಗೆ ಸ್ಫೋಟ ಸಂಭವಿಸಿದೆ ಎಂದು ಹೇಳಿದರು. ಅಕ್ರಮವಾಗಿ ಮನೆಯಿಂದ ಕಾರ್ಖಾನೆ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಪ.ಬಂಗಾಳದ ಆಹಾರ ಸಚಿವ ಮತ್ತು ಸ್ಥಳೀಯ ಶಾಸಕ ರಥಿನ್ ಘೋಷ್ ಹೇಳಿದ್ದಾರೆ.

ನಾನು ಸ್ಥಳಕ್ಕೆ ಭೇಟಿ ನೀಡುತ್ತೇನೆ. ಸ್ಫೋಟ ಸಂಭವಿಸಿದ ಕಟ್ಟಡದಲ್ಲಿ ಪಟಾಕಿಗಳನ್ನು ದಾಸ್ತಾನು ಮಾಡಲಾಗಿತ್ತು. ಇದು ಪಟಾಕಿ ತಯಾರಿಸುವ ಪ್ರದೇಶವಲ್ಲ. ನೀಲ್‌ಗುಂಜ್‌ನ ನಾರಾಯಣಪುರ ಪ್ರದೇಶವು ಮುಖ್ಯ ಪಟಾಕಿ ಉತ್ಪಾದನಾ ಕೇಂದ್ರವಾಗಿದೆ. ನಾರಾಯಣಪುರದಲ್ಲಿರುವ ಎಲ್ಲಾ ಪಟಾಕಿ ಘಟಕಗಳನ್ನು ಪೊಲೀಸರು ಮುಚ್ಚಿದ್ದರು ಎಂದು ಸಚಿವ ಘೋಷ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಅಸ್ಸಾಂ: ಬಿಜೆಪಿ  ಸಂಸದರ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...