Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...