Homeಮುಖಪುಟಹಲವಾರು ರಾಜಕಾರಣಿಗಳು, ತಾರೆಯರ ಬ್ಲೂಟಿಕ್‌ ತೆರವುಗೊಳಿಸಿದ ಟ್ವಿಟರ್‌

ಹಲವಾರು ರಾಜಕಾರಣಿಗಳು, ತಾರೆಯರ ಬ್ಲೂಟಿಕ್‌ ತೆರವುಗೊಳಿಸಿದ ಟ್ವಿಟರ್‌

- Advertisement -
- Advertisement -

ಹಲವಾರು ಹೆಸರಾಂತ ಸೆಲೆಬ್ರಿಟಿಗಳು, ಹಲವು ಮುಖ್ಯಮಂತ್ರಿಗಳು ಸೇರಿದಂತೆ ಭಾರತದ ಅನೇಕ ಪ್ರಭಾವಿ ವ್ಯಕ್ತಿಗಳ ಬ್ಲೂಟಿಕ್‌ ಅನ್ನು ಟ್ವಿಟರ್‌ನಲ್ಲಿ ತೆಗೆದುಹಾಕಲಾಗಿದೆ.

ಎಲಾನ್ ಮಸ್ಕ್‌ ಒಡೆತನದ ಟ್ವಿಟರ್‌ನಲ್ಲಿ ಬಳಕೆದಾರರು ಬ್ಲೂಟಿಕ್ ಪಡೆಯಬೇಕಾದರೆ ಚಂದಾದಾರರಾಗಬೇಕೆಂಬ ನಿಯಮ ಜಾರಿಗೆ ತಂದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರ ಖಾತೆಗಳ ಬ್ಲೂಟಿಕ್‌ ತೆರವು ಮಾಡಲಾಗಿದೆ.

ಟ್ವಿಟರ್‌ನ ಹೊಸ ಚಂದಾದಾರಿಕೆ ಆಧಾರಿತ ಬ್ಲೂಟಿಕ್‌ ನೀತಿಯಿಂದಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಕೂಡ ವೆರಿಫೈ ಖಾತೆಯ ಸ್ಥಿತಿಯನ್ನು ಕಳೆದುಕೊಂಡಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳು ತಮ್ಮ ವೆರಿಫೈ ಸ್ಥಿತಿಯನ್ನು ಕಳೆದುಕೊಂಡಿವೆ.

ಎಲಾನ್‌ ಮಸ್ಕ್ ಅವರು ಟ್ವಿಟರ್‌ ಸಂಸ್ಥೆಯನ್ನು ಖರೀದಿಸಿದ ನಂತರ, ಬ್ಲೂಟಿಕ್‌ ಬಳಕೆದಾರಿಕೆ ನೀತಿಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿದೆ. ಈ ಹಿಂದೆ, ವೆರಿಫೈ ಖಾತೆಗಳನ್ನು ಉನ್ನತ ವ್ಯಕ್ತಿಗಳು, ಪತ್ರಕರ್ತರು, ಅಧಿಕಾರಿಗಳು, ರಾಜಕಾರಣಿಗಳು ಮತ್ತು ವಿಶೇಷ ಸಂಸ್ಥೆಗಳಿಗೆ ನೀಡಲಾಗುತ್ತಿತ್ತು. ವೆರಿಫೈ ಖಾತೆಗಳನ್ನು ಗುರುತಿಸಲು ಇದರಿಂದ ಅನುವು ಮಾಡಲಾಗುತ್ತಿತ್ತು. ಆದರೆ ಬ್ಲೂಟಿಕ್ ಪಡೆಯಬೇಕಾದರೆ ಇಂತಿಷ್ಟು ಹಣವನ್ನು ಈಗ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿರಿ: ಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

ಟ್ವಿಟರ್‌ನ ಆದಾಯ ದೃಷ್ಟಿಯಿಂದಾಗಿ ಈ ನೀತಿಯನ್ನು ತರಲಾಗಿದೆ. ಕಳೆದ ತಿಂಗಳು ಮಾಡಿದ ಟ್ವೀಟ್‌ನಲ್ಲಿ ಎಲಾನ್ ಮಸ್ಕ್‌, “ಅಕ್ಟೋಬರ್ ಮತ್ತು ಮಾರ್ಚ್ ನಡುವೆ ಜಾಹೀರಾತು ಆದಾಯದಲ್ಲಿ 50% ಕುಸಿತವಾಗಿದೆ” ಎಂದಿದ್ದರು. “ಪರ್ಯಾಯ ಆದಾಯದ ಯೋಜನೆಗಳನ್ನು ಟ್ವಿಟರ್‌ ಹೊಂದಿರುವುದು ಇದರಿಂದ ಸ್ಪಷ್ಟವಾಗುತ್ತದೆ.”

ಹಳೆಯ ವೆರಿಫೈ ಟ್ಯಾಗ್ ತೆಗೆದುಹಾಕುವ ತನ್ನ ಯೋಜನೆಗಳ ಆರಂಭಿಕ ಘೋಷಣೆಯ ನಂತರ, ಟ್ವಿಟರ್ ಸಂಸ್ಥೆ ಪ್ರತಿಕ್ರಿಯಿಸಿದ್ದು, “ಈ ಸೇವೆಗೆ ಹಣ ಪಾವತಿಸಬೇಕೆ ಎಂದು ನಿರ್ಧರಿಸಲು ವೆರಿಫೈ ಖಾತೆಗಳ ಬಳಕೆದಾರರಿಗೆ ನೀಡಿರುವ ಗಡುವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ” ಎಂದು ತಿಳಿಸಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, “ಪ್ರಸ್ತುತ, ಟ್ವಿಟರ್‌ನ ಬಳಕೆದಾರರಲ್ಲಿ ಕೇವಲ ಒಂದು ಸಣ್ಣ ಭಾಗ ಅಂದರೆ ಸರಿಸುಮಾರು 1 ಪ್ರತಿಶತದಷ್ಟು ಜನರು ಮಾತ್ರ ಬ್ಲೂಟಿಕ್‌‌ ಚಂದಾದಾರರಾಗಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...