Homeಚಳವಳಿನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ತಡೆಯೊಡ್ಡಿದ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದ್ದೇನು ಗೊತ್ತೆ?

ನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ತಡೆಯೊಡ್ಡಿದ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದ್ದೇನು ಗೊತ್ತೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |
ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆಯ ವಿಚಾರದಲ್ಲಿ ಕೆಲಸ ಮಾಡಿರುವ ಸರ್ಕಾರೇತರ ಸಂಘಸಂಸ್ಥೆಗಳೊಂದಿಗೆ ತಮಿಳುನಾಡು ಸರ್ಕಾರ ಕೆಲಸ ಮಾಡಬೇಕು ಮತ್ತು ಸದ್ಯ ತಲೆದೋರಿರುವ ನೀರಿನ ಅಭಾವದ ಸಮಸ್ಯೆಗೆ ಪರಿಹಾರ ಕಂಡು ಹಿಡಿಬೇಕೆಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಜೊತೆಗೆ ನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ಯಾವುದೇ ಕಾರಣಕ್ಕೂ ತಡೆಯೊಡ್ಡಬೇಡಿ ಬದಲಿಗೆ ಬೆಂಬಲಿಸಿ ಎಂದು ತಾಕೀತು ಮಾಡಿದೆ.

ಜೂನ್ 30 ರಂದು ತಮಿಳುನಾಡಿನ ವಲ್ಲುವಾರುಕೊಟ್ಟಂ ಬಳಿ ನೀರಿನ ಸಮಸ್ಯೆಯ ಕುರಿತು ಪ್ರತಿಭಟನೆ ನಡೆಸಲು ಅರಪ್ಪೋರ್ ಐಕ್ಕಾಮ್ ಎಂಬ ಸಂಘಟನೆ ನಿರ್ಧರಿಸಿತ್ತು. ಆದರೆ ಚನ್ನೈ ಪೊಲೀಸ್ ಕಮಿಷನರ್ ಇದಕ್ಕೆ ಅವಕಾಶ ನೀಡಿರಲಿಲ್ಲ. ಇದನ್ನು ಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಜಸ್ಟೀಸ್ ಎನ್.ಆನಂದ್ ವೆಂಕಟೇಶ್‍ರವರು ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯು ಬರ್ನಿಂಗ್ ಇಶ್ಯೂ ಸುತ್ತಾ ನಡೆಯುತ್ತಿದೆ. ಇದರ ಜಾಗೃತಿ ಸಾರ್ವಜನಿಕರಿಗೆ ಇರಲೇಬೇಕು. ಸರ್ಕಾರವು ನಗರದ ಮೂಲೆ ಮೂಲೆಗೆ ಸಮರ್ಪಕವಾಗಿ ನೀರು ತಲುಪುವಂತೆ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಯಾಕೆ ನೀರಿಗಾಗಿ ಈ ಪರಿಸ್ಥಿತಿ ಬಂತು ಎಂಬುದರ ಕುರಿತು ಚಿಂತಸಬೇಕು. ನಮ್ಮ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವುದರಿಂದ ಮತ್ತು ನಿರೀನ ಸಮರ್ಪಕ ನಿರ್ವಹಣೆ ಮಾಡದಿರುವುದರಿಂದಲೇ ಈ ಸಮಸ್ಯೆ ತಲೆದೋರಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಈ ಸಮಸ್ಯೆಯ ಪರಿಹಾರಕ್ಕಾಗಿ ಜನರಲ್ಲಿ ಜಾಗೃತಿ ಬರುವುದು ಅತ್ಯಗತ್ಯವಾಗಿದೆ. ಇಂತಹ ಸಮಯದಲ್ಲಿ ಪ್ರತಿಭಟನೆಗೆ ತಡೆವೊಡ್ಡುವುದು ಬಿಟ್ಟು ಸರ್ಕಾರ ಸಹಕರಿಸಬೇಕಿದೆ. ಆಗ ಮಾತ್ರ ಇಡೀ ರಾಜ್ಯದ ಜನರಿಗೆ ವಾಸ್ತವವನ್ನು ಅರ್ಥ ಮಾಡಿಸಲು ಸಾಧ್ಯ. ಈ ವಿಚಾರದಲ್ಲಿ ಸಂಘ ಸಂಸ್ಥೆಗಳು ಮಹತ್ವದ ಕೆಲಸ ಮಾಡುತ್ತಿವೆ. ಹಾಗಾಗಿ ಸರ್ಕಾರ ಇನ್ನಿತರ ಸಂಘ ಸಂಸ್ಥೆಗಳ ಜೊತೆಸೇರಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನಪಡಬೇಕೆಂದು ಕೋರ್ಟ್ ಹೇಳಿದೆ.

ಜೂನ್ 20ರಂದೇ ಪ್ರತಿಭಟನೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಪೊಲೀಸ್ ಕಮಿಷನರ್ ಅವಕಾಶ ನಿರಾಕರಿಸಿದ್ದರು. ಹಾಗಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಯ್ತು ಎನ್ನುವ ಅರ್ಜಿದಾರರು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ಖಾತ್ರಿಗೊಳಿಸಿದೆ, ಹೋರಾಟ ಮಾಡುವುದು ನಮ್ಮ ಮೂಲಭೂ ಹಕ್ಕು ಎಂದು ಪ್ರತಿಪಾದಿಸಿದ್ದರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...